February 8, 2023

Newsnap Kannada

The World at your finger tips!

Attempt , Murder , Crime

Miscreants attempt to attack Beltangadi MLA Harish ಬೆಳ್ತಂಗಡಿ ಶಾಸಕ ಹರೀಶ್‌ ಮೇಲೆ ದುಷ್ಕರ್ಮಿಗಳಿಂದ ತಲವಾರ್‌ ದಾಳಿಗೆ ಯತ್ನ

ಬೆಳ್ತಂಗಡಿ ಶಾಸಕ ಹರೀಶ್‌ ಮೇಲೆ ದುಷ್ಕರ್ಮಿಗಳಿಂದ ತಲವಾರ್‌ ದಾಳಿಗೆ ಯತ್ನ

Spread the love

ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ ಮೇಲೆ ದುಷ್ಕರ್ಮಿಗಳು ದಾಳಿಗೆ ಯತ್ನಿಸಿದ್ದಾರೆ. ನಿನ್ನೆ ರಾತ್ರಿ ಸುಮಾರು 11.30 ಗಂಟೆ ಶಾಸಕರ ಕಾರು ಅಡ್ಡಗಟ್ಟಿ ಬೆದರಿಕೆ ಹಾಕಿ ಪಾರಾರಿಯಾಗಿದ್ದಾನೆ.

ಕಳೆದ ರಾತ್ರಿ ಶಾಸಕರು ಮಂಗಳೂರು ವಿಮಾನ ನಿಲ್ದಾಣದಿಂದ ಬೆಳ್ತಂಗಡಿಗೆ ಪ್ರಯಾಣಿಸುತ್ತಿದ್ದ ವೇಳೆ ಫರಂಗಿಪೇಟೆ ಬಳಿ ಸ್ಕಾರ್ಪಿಯೋ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಶಾಸಕರ ಕಾರು ಅಡ್ಡಗಟ್ಟಿ ತಲ್ವಾರ್‌ ನಿಂದ ದಾಳಿಗೆ ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.ಇದನ್ನು ಓದಿ –ರಾಜ್ಯದ ಶಾಲೆಗಳಲ್ಲಿ ಶನಿವಾರ ‘ಬ್ಯಾಗ್ ಲೆಸ್ ಡೇ’ ಆಚರಣೆ: ಮಕ್ಕಳಿಗೆ ಆ ದಿನ ಪಾಠ ಇಲ್ಲ – ಆಟ ಮಾತ್ರ

ಹರೀಶ್‌ ಪೂಂಜಾ ತಮ್ಮ ಗೆಳೆಯರ ಕಾರಿನಲ್ಲಿ ಮುಂದೆ ಹೋಗುತ್ತಿದ್ದರೆ,ಈ ಕಾರನ್ನು ತಡೆಗಟ್ಟಿದ ದುಷ್ಕರ್ಮಿಗಳು ಅವಾಚ್ಯ ಶಬ್ದದಿಂದ ನಿಂದಿಸಿ, ತಲವಾರು ಝಳಪಿಸಿ ಪರಾರಿಯಾಗಿದ್ದಾರೆ.

ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಶಾಸಕ ಪೂಂಜಾ ಕಾರು ಚಾಲಕ ನವೀನ್‌ ದೂರು ನೀಡಿದ್ದಾರೆ.

error: Content is protected !!