ಗಣೇಶೋತ್ಸವದ ಅಂಗವಾಗಿ ಹೊನ್ನಾಳಿಯಲ್ಲಿ ಫ್ಲೆಕ್ಸ್ ಅಳವಡಿಸಲಾಗಿತ್ತು. ಫ್ಲೆಕ್ಸ್‌ನಲ್ಲಿದ್ದ ಸಾವರ್ಕರ್ ಫೋಟೋ ಜೊತೆಗೆ ಬಾಲಗಂಗಾಧನಾಥ ತಿಲಕರ ಫೋಟೋವನ್ನು ಸಹ ಕಿಡಿಗೇಡಿಗಳು ಹರಿದು ಹಾಕಿದ್ದಾರೆ. ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿದ ಹಿಂದೂ ಕಾರ್ಯಕರ್ತರು ಕಿಡಿಗೇಡಿಗಳನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ.
ಕಾಂಗ್ರೆಸ್ ವಿರುದ್ಧ ಹೋರಾಟಕ್ಕೆ ಈಗ ರಾಜ್ಯ ಬಿಜೆಪಿಗೆ ರಾಜಾಹುಲಿ ಬಲ ಸಿಗಲಿದೆ. ಸಾವರ್ಕರ್ ರಥಯಾತ್ರೆಗೆ ಚಾಲನೆ ಕೊಟ್ಟಿರುವ ಯಡಿಯೂರಪ್ಪ ಆಗಸ್ಟ್ 30ರ ರಥಯಾತ್ರೆಯ ಸಮಾರೋಪದಲ್ಲಿ ಭಾಗಿ ಆಗಿ ಕಾಂಗ್ರೆಸ್ ವಿರುದ್ಧ ಗುಡುಗಲಿದ್ದಾರೆ.
ಉಳಿದ ಜಿಲ್ಲೆಗಳಲ್ಲೂ ಸಾವರ್ಕರ್ ರಥಯಾತ್ರೆ ಮೂಲಕ ಪಕ್ಷದ ಪರ ಟ್ರೆಂಡ್ ನಿರ್ಮಾಣಕ್ಕೆ ಪ್ಲಾನ್ ಮಾಡಲಾಗಿದೆ. ಇಂದು ಎಚ್.ಡಿ.ಕೋಟೆ, ಸರಗೂರು, 25, 26ರಂದು ನಂಜನಗೂಡು ಮೂಲಕ ಚಾಮರಾಜನಗರ ಜಿಲ್ಲೆ, 27 ರಿಂದ 29ರವರೆಗೆ ಮಂಡ್ಯ ಜಿಲ್ಲೆಯಲ್ಲಿ ರಥಯಾತ್ರೆ ಸಾಗಲಿದೆ 30ಕ್ಕೆ ಮೈಸೂರಿನಲ್ಲಿ ಕೊನೆಗೊಳ್ಳಲಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು