ವಿವಾಹಿತ ಮಹಿಳೆ ಪತಿಯ ಮನೆಯಿಂದ ನಾಪತ್ತೆಯಾಗಿ, ಫೇಸ್ ಬುಕ್ ಪ್ರಿಯಕರನ ಜೊತೆ ಪರಾರಿಯಾಗಿರುವ ಬಗ್ಗೆ ಪತಿಯೇ ಅನುಮಾನ ವ್ಯಕ್ತಪಡಿಸಿದ ಘಟನೆ ವಿಟ್ಲ ಸಮೀಪದ ಕೊಳ್ನಾಡುವಿನಲ್ಲಿ ಜರುಗಿದೆ.
ಪಾಣಾಜಿಕೋಡಿಯ ಅರುಣ್ ಡಿಸೋಜ ಎಂಬವರ ಪತ್ನಿ ಶಿಲ್ಪಾ ಡಿಸೋಜ ನಾಪತ್ತೆಯಾದ ಮಹಿಳೆ.
ಪತ್ನಿ ಕಾಣೆಯಾಗಿರುವ ಬಗ್ಗೆ ಅರುಣ್ ಡಿಸೋಜ ರವರು ವಿಟ್ಲ ಠಾಣೆಗೆ ದೂರು ನೀಡಿದ್ದಾರೆ. ಆಕೆಯನ್ನು ಮರಳಿ ಕರೆ ತರುವಂತೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಹೇಳಿದ್ದಾರೆ.
ನಾಪತ್ತೆಯಾಗಿರುವ ಶಿಲ್ಪಾ ತನ್ನ ಪತಿಗೆ ದೂರವಾಣಿ ಮೂಲಕ ಕರೆ ಮಾಡಿ ನಾನು ಮನೆ ಬಿಟ್ಟು ಹೋಗುತ್ತಿರುವು ದಾಗಿ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.
ಆ ಬಳಿಕ ಪತಿ ಅರುಣ್ ಅನೇಕ ಬಾರಿ ಅಕೆಗೆ ಕರೆ ಮಾಡಿದರೂ ಕರೆಯನ್ನು ಸ್ವೀಕರಿಸಿಲ್ಲ , ವಾಪಸ್ಸು ಮನೆಗೂ ಬಂದಿಲ್ಲ. ಹೀಗಾಗಿ ಆಕೆ ಫೇಸ್ಬುಕ್ ನಲ್ಲಿ ಪರಿಚಯವಾದ ಬೆಂಗಳೂರಿನ ಯಶವಂತಪುರ ನಿವಾಸಿ ಜೊತೆಯಲ್ಲಿ ಹೋಗಿರಬಹುದು ಎಂದು ಸಂಶಯ ವ್ಯಕ್ತಪಡಿಸಿ ಆಕೆ ವಿರುದ್ದ ದೂರು ನೀಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ
ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ