ವಿಚ್ಛೇದನದಲ್ಲಿ ತಪ್ಪು ಯಾವಾಗಲೂ ಪುರುಷರದ್ದೇ ಆಗಿರುತ್ತದೆ. ಪುರುಷ ಬೇಟೆಗಾರ ಆಗಿದ್ದರೆ, ಮಹಿಳೆ ಪೋಷಕಿಯಾಗಿರುತ್ತಾಳೆ ಎಂದು ಹೇಳಿದ್ದಾರೆ ಹಿಂದಿ ನಟಿ, ಆಗಾಗ್ಗೆ ವಿವಾದಕ್ಕೆ ಕಾರಣರಾಗುವ ಕಂಗನಾ ರಣಾವತ್.
ಮಹಿಳೆಯರನ್ನು ಬಟ್ಟೆಯಂತೆ ಬದಲಿಸಿ ನಂತರ ನಾವು ಉತ್ತಮ ಸ್ನೇಹಿತರೆಂದು ಹೇಳಿಕೊಳ್ಳುವವರ ಮೇಲೆ ದಯೆ ತೋರುವುದನ್ನು ನಿಲ್ಲಿಸಿ. ನೂರು ಜನ ಮಹಿಳೆಯರಲ್ಲಿ ಒಂದು ಮಹಿಳೆ ತಪ್ಪು ಮಾಡುವುದು ನಿಜ. ಆದರೆ ಎಲ್ಲರೂ ಅಲ್ಲ ಎಂದು ಖಚಿತವಾಗಿ ನುಡಿದಿದ್ದಾರೆ.
ಟಾಲಿವುಡ್ ನಟ ನಾಗಚೈತನ್ಯ ಮತ್ತು ಸಮಂತಾ ವಿಚ್ಛೇದನಕ್ಕೆ ಸಂಬಂಧಿಸಿದಂತೆ ತಮ್ಮ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಹಂಚಿಕೊಂಡಿರುವ ಈ ನಟಿ, ಈ ವಿಚ್ಛೇದನ ವಿಷಯದಲ್ಲಿ ಬಾಲಿವುಡ್ ನಟ ಅಮೀರ್ ಖಾನ್ ಹೆಸರನ್ನೂ ಪರೋಕ್ಷವಾಗಿ ಪ್ರಸ್ತಾಪಿಸಿದ್ದಾರೆ.
ಮದುವೆಯಾಗಿ ನಾಲ್ಕು ವರ್ಷಗಳ ನಂತರ ಈಗ ಇದ್ದಕ್ಕಿದಂತೆ ಪತ್ನಿಗೆ ಡಿವೋರ್ಸ್ ನೀಡಿದ್ದಾರೆ. ಇವರು ಇತ್ತೀಚಿಗೆ ಬಾಲಿವುಡ್ ಡಿವೋರ್ಸ್ ಎಕ್ಸ್ಪರ್ಟ್ ಬಾಲಿವುಡ್ ಸೂಪರ್‌ಸ್ಟಾರ್ ಭೇಟಿಯಾಗಿದ್ದರು. ಅನೇಕ ಮಹಿಳೆಯರು ಹಾಗೂ ಮಕ್ಕಳ ಜೀವನ ಹಾಳುಮಾಡಿ, ಈಗ ಮಾರ್ಗದರ್ಶಕರಾಗಿದ್ದಾರೆ. ನಾನು ಯಾರ ಬಗ್ಗೆ ಮಾತನಾಡುತ್ತಿದ್ದೇನೆ ಎಂಬುದು ನಿಮಗೆ ಗೊತ್ತಾಗುತ್ತಿದೆ ಎಂದು ಕಂಗನಾ ಹೇಳಿದ್ದಾರೆ.
ಅಮೀರ್ ಖಾನ್ ನಟಿಸಿ, ನಿರ್ಮಿಸುತ್ತಿರುವ “ಲಾಲ್ ಸಿಂಗ್ ಚಡ್ಡಾ’ ಚಿತ್ರದಲ್ಲಿ ನಾಗಚೈತನ್ಯ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರ ಮುಂದಿನ ವರ್ಷ ಬಿಡುಗಡೆಯಾಗಲಿದೆ ಎಂದು ವರದಿಯಾಗಿದೆ. 2017 ರಲ್ಲಿ ನಾಗಚೈತನ್ಯ ಮತ್ತು ಸಮಂತಾ ದಾಂಪತ್ಯ ಜೀವನ ಪ್ರವೇಶಿಸಿದ್ದರು.
- ಸಂಸತ್ ಕಟ್ಟಡದ ಬಳಿ ಬೆಂಕಿ ಹಚ್ಚಿಕೊಂಡ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು
- ಕರ್ತವ್ಯದ ವೇಳೆ ಬ್ರೈನ್ಸ್ಟ್ರೋಕ್ಗೆ ಬಲಿಯಾದ ಅರಣ್ಯ ಇಲಾಖೆ ನೌಕರ
- ಮುದ್ದುಲಕ್ಷ್ಮಿ ಸೀರಿಯಲ್ ನಟ ಚರಿತ್ ಬಾಳಪ್ಪ ಲೈಂಗಿಕ ದೌರ್ಜನ್ಯ ಆರೋಪದಡಿ ಬಂಧನ
- ನಾಳೆ ರಾಜ್’ಘಾಟ್ನಲ್ಲಿ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಅಂತ್ಯಸಂಸ್ಕಾರ
- ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ: ಬೆಂಗಳೂರು ಸೇರಿ 21 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
More Stories
ಸಂಸತ್ ಕಟ್ಟಡದ ಬಳಿ ಬೆಂಕಿ ಹಚ್ಚಿಕೊಂಡ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು
ಕರ್ತವ್ಯದ ವೇಳೆ ಬ್ರೈನ್ಸ್ಟ್ರೋಕ್ಗೆ ಬಲಿಯಾದ ಅರಣ್ಯ ಇಲಾಖೆ ನೌಕರ
ಮುದ್ದುಲಕ್ಷ್ಮಿ ಸೀರಿಯಲ್ ನಟ ಚರಿತ್ ಬಾಳಪ್ಪ ಲೈಂಗಿಕ ದೌರ್ಜನ್ಯ ಆರೋಪದಡಿ ಬಂಧನ