December 24, 2024

Newsnap Kannada

The World at your finger tips!

m k stalin

ಎಂ.ಕೆ ಸ್ಟಾಲಿನ್ ಮೇ 7 ಕ್ಕೆ ಸಿಎಂ‌‌ ಆಗಿ ಪ್ರಮಾಣವಚನ

Spread the love

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಭಾರಿ ಜಯ ಸಾಧಿಸಿದ ದ್ರಾವಿಡ ಮುನ್ನೇತ್ರ ಕಳಗಂ(ಡಿಎಂಕೆ) ಪಕ್ಷದ ನಾಯಕ ಎಂ.ಕೆ ಸ್ಟಾಲಿನ್  ತಮಿಳುನಾಡಿನ ಮುಖ್ಯಮಂತ್ರಿಯಾಗಿ ಮೇ 7 ರಂದು ಪ್ರಮಾಣವಚನ ಸ್ವೀಕರಿಲಿದ್ದಾರೆ.

ತಮಿಳುನಾಡಿನ ಒಟ್ಟು 234 ಕ್ಷೇತ್ರಗಳಲ್ಲಿ ಡಿಎಂಕೆ 159 ಕ್ಷೇತ್ರಗಳಲ್ಲಿ ಗೆದ್ದು ಅಧಿಕಾರದ ಚುಕ್ಕಾಣಿ ಹಿಡಿಯಲು ಸಜ್ಜಾಗ್ತಿದೆ.

ಎಐಎಡಿಎಂಕೆ 75 ಕ್ಷೇತ್ರಗಳಲ್ಲಿ ಗೆದ್ದಿದೆ. ಈ ಚುನಾವಣೆಯಲ್ಲಿ ಎಐಎಡಿಎಂಕೆ ಜೊತೆಗೆ ಬಿಜೆಪಿ ಮೈತ್ರಿ ಮಾಡಿಕೊಂಡಿದ್ದರೆ, ಡಿಎಂಕೆ ಜೊತೆಗೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿತ್ತು. ಇನ್ನು ಸ್ಟಾಲಿನ ಪುತ್ರ ಉದಯಾನಿಧಿ ಸ್ಟಾಲಿನ್​ ಸಹ ಚುನಾವಣೆಯಲ್ಲಿ ಸ್ಪರ್ಧಿಸಿ ಜಯ ಸಾಧಿಸಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!