ಮಹಿಳಾ ದಸರಾಕ್ಕೆ ಚಾಲನೆ ನೀಡಿದ ಶಾಸಕ ಎ.ಎಸ್. ರವೀಂದ್ರ ಶ್ರೀಕಂಠಯ್ಯ

Team Newsnap
1 Min Read

ಭಾರತ ದೇಶದಲ್ಲಿ ಮಹಿಳೆಯರಿಗೆ ವಿಶೇಷ ಗೌರವ ಹಾಗೂ ಸ್ಥಾನಮಾನವಿದೆ. ಎಲ್ಲಿ ಮಹಿಳೆಯನ್ನು ಗೌರವಿಸುತ್ತಾರೆ ಅಲ್ಲಿ ಶಾಂತಿ ನೆಮ್ಮದಿ ಇರುತ್ತೆ ಎಂದು ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್. ರವೀಂದ್ರ ಶ್ರೀಕಂಠಯ್ಯ ರವರು ತಿಳಿಸಿದರು.

ಶ್ರೀರಂಗಪಟ್ಟಣ ತಾಲ್ಲೂಕಿನ ಶ್ರೀರಂಗ ವೇದಿಕೆಯಲ್ಲಿ ನಡೆದ ಮಹಿಳಾ ದಸರಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ರವೀಂದ್ರ ಎಲ್ಲಾ ಕ್ಷೇತ್ರದಲ್ಲೂ ಮಹಿಳೆಯರು ಸ್ಥಾನವನ್ನು ಪಡೆದುಕೊಳ್ಳುತ್ತಿದ್ದಾರೆ. ಕೆಲವು ವರ್ಷಗಳ ಹಿಂದೆ‌ ಮಹಿಳೆಯರಿಗೆ ಸವಲತ್ತುಗಳು ಇರಲಿಲ್ಲ. ಪ್ರಸ್ತುತದಲ್ಲಿ ಮಹಿಳೆಯರಿಗೆ ಸರ್ಕಾರ ಅನೇಕ ರೀತಿಯ ಸವಲತ್ತುಗಳನ್ನು ಒದಗಿಸುತ್ತಿದೆ.ಮಹಿಳೆಯರು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

ನವರಾತ್ರಿಯ ಹಬ್ಬದಲ್ಲಿ‌ ಎಲ್ಲಾ ಹೆಣ್ಣು ದೇವತೆಗಳನ್ನು ಪೂಜಿಸುವ ಪದ್ಧತಿ ಇದೆ. ಮಹಿಳಾ ದಸರಾ ಅರ್ಥ ಪೂರ್ಣವಾಗಿ ಆಚರಣೆ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು. ನವರಾತ್ರಿಯಲ್ಲಿ ದೇವಿಯ ಒಂಬತ್ತು ಅವತಾರಗಳು

ಜಿಲ್ಲಾಧಿಕಾರಿ ಎಸ್. ಅಶ್ವತಿ ರವರು ಮಾತನಾಡಿ ಶ್ರೀರಂಗಪಟ್ಟಣದ ದಸರಾ ಮಹೋತ್ಸವ ಅಂಗವಾಗಿ ಸೆ.28ರಿಂದ ನಿರಂತರವಾಗಿ ಯುವದಸರಾ, ರೈತದಸರಾ, ಕ್ರೀಡಾ ದಸರಾ,ಮಹಿಳಾ ದಸರಾ ಹಾಗೂ ವಿವಿಧ ಕಾರ್ಯಕ್ರಮವನ್ನು ಶ್ರೀರಂಗವೇದಿಕೆಯಲ್ಲಿ ಆಯೋಜಿಸಲಾಗಿದೆ ಎಂದು ತಿಳಿಸಿದರು.

ಮಹಿಳಾ ದಸರಾದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸ್ತ್ರೀ ಶಕ್ತಿಸಂಘದ ಮಹಿಳೆಯರು ಭಾಗವಹಿಸಿರುವುದು ಬಹಳ ಸಂತಸ ತಂದಿದೆ ಎಂದರು. ಮೈಸೂರು ದಸರಾ – ಮನೆ ಮನಗಳಲ್ಲಿ ಗೊಂಬೆಗಳ ಸಡಗರ

ರಂಗೋಲಿ ಸ್ಪರ್ಧೆ, ಮೆಹಂದಿ ಸ್ಪರ್ಧೆ ಹಾಗೂ ಇನ್ನಿತರ ಸ್ಪರ್ಧೆಗಳಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮಲ್ಲಿರುವ ಪ್ರತಿಭೆಗಳನ್ನು ಆನವರಣಗೊಳಿಸಬೇಕು. ಮಹಿಳೆಯರ ಪ್ರತಿಭೆ ಹಾಗೂ ಕಲೆ ಪ್ರದರ್ಶನಕ್ಕಾಗಿ ಮುಂದಿನ ದಿನಗಳಲ್ಲಿ ನಿಮಗೆ ಇನ್ನಷ್ಟು ಉತ್ತಮ ವೇದಿಕೆ ಕಲ್ಪಿಸುತ್ತೇವೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ರಂಗೋಲಿ ಸ್ಪರ್ಧೆ ಹಾಗೂ ಮೆಹಂದಿ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಪ್ರಶಸ್ತಿ ನೀಡಿ ಅವರನ್ನು ಗೌರವಿಸಲಾಯಿತು. ಶ್ರೀರಂಗಪಟ್ಟಣದ ತಹಶೀಲ್ದಾರ್ ಶ್ವೇತಾ ಎನ್. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನಾಗರಾಜು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Share This Article
Leave a comment