ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಶಾಸಕ ಗುಬ್ಬಿ ಶ್ರೀನಿವಾಸ್ ಮತ್ತು ಶ್ರೀನಿವಾಸ್ ಗೌಡರನ್ನು ಉಚ್ಚಾಟನೆ ಮಾಡಲು ಜೆಡಿಎಸ್‍ನಿಂದ ತೀರ್ಮಾನ ಮಾಡಲಾಗಿದೆ. ಈ ಸಂಬಂಧ ನಾಳೆಯೇ ಆದೇಶ ಹೊರಡಿಸುವುದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಸ್ಪಷ್ಟನೆ ನೀಡಿದರು.
ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ಇಬ್ಬರನ್ನು ಅಮಾನತು ಮಾಡಲಾಗಿದೆ. ಕುಮಾರಸ್ವಾಮಿ ಅವರು ಬೆಂಗಳೂರಿನ ಹೊರಗೆ ಇದ್ದಾರೆ. ನಾಳೆ ಅವರ ಬಳಿ ಸಹಿ ಪಡೆದ ಬಳಿಕ ನಾಳೆ ಅಧಿಕೃತ ಆದೇಶ ಹೊರಡಿಸಲಾಗುವುದು ಎಂದರು.
ಇದನ್ನು ಓದಿ –ಕರ್ನಾಟಕ ನೂತನ ಲೋಕಾಯುಕ್ತರಾಗಿ ನಿವೃತ್ತ ನ್ಯಾ. ಬಿ.ಎಸ್.ಪಾಟೀಲ್ ನೇಮಕ
ನಾಳೆ ಸ್ಪೀಕರ್ ಗೆ ದೂರು :
ಈ ಇಬ್ಬರು ಶಾಸಕರ ಸದಸ್ಯತ್ವ ರದ್ದು ಮಾಡಲು ಬುಧವಾರ ಸ್ಪೀಕರ್‌ಗೆ ದೂರು ಕೊಡುತ್ತೇವೆ. ಇಬ್ಬರು ಪಕ್ಷದ ವಿಪ್ ಉಲ್ಲಂಘನೆ ಮಾಡಿದ್ದಾರೆ. ಕಾಂಗ್ರೆಸ್-ಬಿಜೆಪಿ ಒಟ್ಟಾಗಿ ಅಡ್ಡ ಮತದಾನ ಮಾಡಿಸಿದ್ದಾರೆ. ಹೀಗಾಗಿ ಅನರ್ಹ ಮಾಡಿ ಎಂದು ಮನವಿ ಮಾಡುತ್ತೇವೆ. ಈಗ ಇರುವ ಸ್ಪೀಕರ್ ಸಂವಿಧಾನ ಬದ್ಧವಾಗಿ ಕೆಲಸ ಮಾಡುತ್ತಾರೆ ಎನ್ನುವ ನಂಬಿಕೆ ಇದೆ. ಒಂದು ವೇಳೆ ಸ್ಪೀಕರ್ ಸರಿಯಾಗಿ ನಿರ್ಣಯ ಮಾಡದೇ ಹೋದರೆ ಕೋರ್ಟ್ ಮೊರೆ ಹೋಗುತ್ತೇವೆ ಎಂದು ತಿಳಿಸಿದರು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು