ಕೆಎಸ್‌ಡಿಎಲ್‌ ಅಧ್ಯಕ್ಷ ಸ್ಥಾನಕ್ಕೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ರಾಜೀನಾಮೆ

Team Newsnap
1 Min Read
MLA Madal Virupakshappa to Lokayukta custody for 5 days ಶಾಸಕ ಮಾಡಾಳು ವಿರೂಪಾಕ್ಷಪ್ಪ 5 ದಿನ ಲೋಕಾಯುಕ್ತ ವಶಕ್ಕೆ

ವಿಧಾನಸಭಾ ಚುನಾವಣೆಯ ಸಿದ್ದತೆ ಮಾಡಿಕೊಳ್ಳುತ್ತಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಲೋಕಾಯುಕ್ತ ಶಾಕ್ ನೀಡಿದೆ.

ಭ್ರಷ್ಟಾಚಾರ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ರಾಜ್ಯ ಸರ್ಕಾರಕ್ಕೆ ಭಾರೀ ಮುಜುಗರವಾಗಿದೆ.

ರಾಜ್ಯ ಸರ್ಕಾರಕ್ಕೆ ಉಂಟಾಗಿರುವ ಮುಜಗರದಿಂದ ತಪ್ಪಿಸಿಕೊಳ್ಳುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಡ್ಯಾಮೇಜ್ ಕಂಟ್ರೋಲ್‌ಗೆ ಮುಂದಾಗಿದ್ದಾರೆ, ಈ ಹಿನ್ನೆಲೆಯಲ್ಲಿ ರಾಜ್ಯ ಸಾಬೂನು ಮತ್ತು ಮಾರ್ಜಕಗಳ ನಿಗಮದ ಅಧ್ಯಕ್ಷ‌ ಮಾಡಾಳ್ ವಿರೂಪಾಕ್ಷಪ್ಪಗೆ ರಾಜೀನಾಮೆ ನೀಡುವಂತೆ ಸೂಚನೆ ನೀಡಿದರು.

ಪುತ್ರ ಪ್ರಶಾಂತ್ ಮಾಡಾಳ್ ನಿವಾಸದ ಮೇಲೆ ಲೋಕಾಯುಕ್ತ ದಾಳಿ ಬೆನ್ನಲ್ಲೆ ಶಾಸಕ ವಿರೂಪಾಕ್ಷಪ್ಪ ಅವರು ಕೆಎಸ್​ಡಿಎಲ್ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ.

ಶಾಸಕರು ಹೇಳಿದ್ದೇನು?

ಮಾರ್ಚ್ 2 ರಂದು ನಡೆದ ಲೋಕಾಯುಕ್ತ ದಾಳಿಗೀ ನನಗೂ ಯಾವುದೇ ಸಂಬಂಧವಿರುವುದಿಲ್ಲ. ಇದು ನನ್ನ ಹಾಗೂ ನನ್ನ ಕುಟುಂಬದ ವಿರುದ್ಧ ಶಡ್ಯಂತ್ರವಾಗಿರುತ್ತದೆ. ಆದಾಗಿಯೂ ನನ್ನ ಮೇಲೆ ಆಪಾದನೆ ಬಂದಿರುವುದರಿಂದ ನಾನು ನೈತಿಕ ಹೊಣೆ ಹೊತ್ತು ಕೆ.ಎಸ್.ಡಿ.ಎಲ್‌ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ.ಇದನ್ನು ಓದಿ –ಶಾಸಕ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮನೆಯೇ ಖಜಾನೆ: ಕಂತೆ ಕಂತೆ ನೋಟುಗಳು – 6 ಕೋಟಿ ಸೀಜ್

Share This Article
Leave a comment