ಮಂಡ್ಯ: ತಾನು ಮಾಜಿ ಸಂಸದ ಡಿ.ಕೆ. ಸುರೇಶ್ ಅವರ ತಂಗಿ ಎಂದು ಹೇಳಿಕೊಂಡು, ಚಿನ್ನದ ಅಂಗಡಿ ಮಾಲಕಿಯಿಂದ 8.41 ಕೋಟಿ ರೂ. ಮೌಲ್ಯದ 14.6 ಕೆ.ಜಿ. ಚಿನ್ನವನ್ನು ಸಾಲ ಪಡೆದು ವಂಚಿಸಿರುವ ಪ್ರಕರಣದಲ್ಲಿ ಇದೀಗ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿಯವರ ಭಾಗವಹಿಸುವ ಶಂಕೆ ವ್ಯಕ್ತವಾಗಿದೆ. ಈ ಕುರಿತು ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮಾಜಿ ಶಾಸಕ ಕೆ. ಅನ್ನದಾನಿ ಗಂಭೀರ ಆರೋಪ ಮಾಡಿದ್ದಾರೆ.
ಶಾಸಕರ ಕೈವಾಡ ಶಂಕೆ:
ಮಂಡ್ಯದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಐಶ್ವರ್ಯಗೌಡ ಮತ್ತು ಶಾಸಕರ ನಡುವೆ ನಂಟಿರುವ ಶಂಕೆ ಇದ್ದು,ಕಾಂಗ್ರೆಸ್ ಪಕ್ಷದ ಇನ್ನಿತರ ನಾಯಕರೂ ಈ ವಂಚನೆ ಪ್ರಕರಣದಲ್ಲಿ ಪಾತ್ರವಹಿಸಿರುವ ಶಂಕೆ ಇದೆ ಎಂದು ಹೇಳಿದರು. ಐಶ್ವರ್ಯಗೌಡಳನ್ನು ಮಂಪರು ಪರೀಕ್ಷೆಗೆ ಒಳಪಡಿಸಲು ಹಾಗೂ ಕಿರುಗಾವಲು ಮೂಲಕ ತನಿಖೆ ನಡೆಯಲು ಸರ್ಕಾರ ಕ್ರಮಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.
ಐಶ್ವರ್ಯ ವಿರುದ್ಧ ಮತ್ತೊಂದು ಎಫ್‌ಐಆರ್:
ವಂಚನೆ ಪ್ರಕರಣದಲ್ಲಿ ಈಗಾಗಲೇ ಜೈಲು ಸೇರಿದ ನಂತರ ಜಾಮೀನು ಮೇಲೆ ಬಿಡುಗಡೆಯಾದ ಐಶ್ವರ್ಯಗೌಡ ಇದೀಗ ಮತ್ತೊಂದು ಸಂಕಷ್ಟ ಎದುರಿಸಿದ್ದಾರೆ. 55 ಲಕ್ಷ ರೂಪಾಯಿ ವಂಚನೆ ಸಂಬಂಧ ಮಂಡ್ಯದಲ್ಲಿ ಮತ್ತೊಂದು ದೂರು ದಾಖಲಾಗಿದೆ. ಸೈಟ್ ಖರೀದಿಸುವ ಆಸೆ ತೋರಿಸಿ ಹಣ ಪಡೆದು ವಂಚಿಸಿರುವ ಆರೋಪ ಈ ದೂರುದಲ್ಲಿ ಉಲ್ಲೇಖಿಸಲಾಗಿದೆ.ಇದನ್ನು ಓದಿ –ಹೊಸ ವರ್ಷದ ಸಂಭ್ರಮ: KSBCLನಿಂದ ಒಂದೇ ದಿನ 308 ಕೋಟಿ ರೂ. ಮದ್ಯ ಮಾರಾಟ
ಹೊಸ ಎಫ್‌ಐಆರ್ ವಿವರಗಳು:
ಮಂಡ್ಯ ನಗರದ ಪೂರ್ವ ಪೊಲೀಸ್ ಠಾಣೆಯಲ್ಲಿ ಐಶ್ವರ್ಯಗೌಡ ಹಾಗೂ ಅವರ ಪತಿ ಹರೀಶ್ ಮತ್ತು ಸೋದರ ಹಳ್ಳಿಮಂಜು ವಿರುದ್ಧ ಐಪಿಸಿ ಸೆಕ್ಷನ್ 416, 417, 420, 510, 34ರ ಅಡಿಯಲ್ಲಿ ದೂರು ದಾಖಲಿಸಲಾಗಿದೆ. ಈ ಪ್ರಕರಣದಲ್ಲಿ ರವಿಕುಮಾರ್ ಮತ್ತು ಪೂರ್ಣಿಮಾ ಎಂಬವರಿಂದ ದೂರು ದಾಖಲಾಗಿದ್ದು, ವಂಚನೆ ಪ್ರಕರಣ ಮತ್ತಷ್ಟು ಗಂಭೀರ ರೂಪ ಪಡೆದುಕೊಳ್ಳುತ್ತಿದೆ.
More Stories
ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ: DYSP ವಿರುದ್ಧ ಗಂಭೀರ ಆರೋಪ
ಐಶ್ವರ್ಯ ಗೌಡ ಪ್ರಕರಣ: ಸರ್ಕಾರದ ವಿರುದ್ಧ ಹೆಚ್ಡಿಕೆ ವಾಗ್ದಾಳಿ
ಸಾರಿಗೆ ನೌಕರರಿಗೆ ಸರ್ಕಾರದ ಭರವಸೆ: 2 ಸಾವಿರ ಕೋಟಿ PF ನಿಧಿ ಬಿಡುಗಡೆ