ಶ್ರೀರಂಗಪಟ್ಟಣ ವಿಧಾನ ಸಭಾ ಕ್ಷೇತ್ರದ ಶಾಸಕ ರವೀಂದ್ರ ಶ್ರೀಕಂಠಯ್ಯ ಅವರು ಸೋಮವಾರ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.

ಶಾಸಕ ರವೀಂದ್ರ ಮಂಗಲ ಗ್ರಾಮದ ಶ್ರೀ ಮಲ್ಲೇಶ್ವರ ಸ್ವಾಮಿ ಸಮುದಾಯ ಭವನದ ಉದ್ಘಾಟನೆ ನೆರವೇರಿಸಿದರು.
ನಂತರ ಶಾಸಕರು ಹೆಬ್ಬಕವಾಡಿ ಗ್ರಾಮದ ಸರ್ಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಕಟ್ಟಡ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು.

ಹೆಬ್ಬಕವಾಡಿ ಗ್ರಾಮದಲ್ಲಿ ಮಂಗಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಗೋದಾಮು ಕಟ್ಟಡ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ಮತ್ತು ಶಿಲಾನ್ಯಾಸ ನೆರವೇರಿಸಿದರು.
ಹನಿಯಂಬಾಡಿ ಗ್ರಾಮದ ಹನುಮಂತೆಗೌಡ ಎಂಬ ರೈತರ ಮನೆಯಲ್ಲಿ ಮೂರು ಹಸುಗಳು ಹಠಾತ್ ಅಸು ನೀಗಿದ್ದವು.

ಇಂದು ಶಾಸಕ ರವೀಂದ್ರ ಅವರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದರು, ಜೊತೆಗೆ ರೂ. 25 ಸಾವಿರ ಧನ ಸಹಾಯ ಮಾಡಿದರು.
ಈ ಸಂದರ್ಭದಲ್ಲಿ ಶಾಸಕರ ಜೊತೆ ಮುಖಂಡರಾದ ತಗ್ಗಳ್ಳಿ ವೆಂಕಟೇಶ್, ಹನಿಯಂಬಾಡಿ ರಾಮಲಿಂಗು, ಗ್ರಾಮ ಪಂಚಾಯಿತಿ ಸದಸ್ಯರಾದ ಲೋಕೇಶ್, ಸುರೇಶ ಉಪಸ್ಥಿತರಿದ್ದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಸಪ್ತಪದಿ ತುಳಿದ ಮೂರೇ ದಿನದಲ್ಲಿ ಹೃದಯಾಘಾತದಿಂದ ನವವಿವಾಹಿತ ಅಕಾಲಿಕ ಸಾವು
ಏ.7 ಕ್ಕೆ ಮೇಲುಕೋಟೆ ವೈರಮುಡಿ ಉತ್ಸವ
ಮಂಡ್ಯದಲ್ಲಿ ಭೀಕರ ಅಪಘಾತ: ಸಾಫ್ಟ್ವೇರ್ ಇಂಜಿನಿಯರ್ ದಾರುಣ ಸಾವು