ಶಾಸಕ ವಿರೂಪಾಕ್ಷಪ್ಪ ಪುತ್ರ 40 ಲಕ್ಷ ರು ಲಂಚ ಸ್ವೀಕಾರದ ವೇಳೆ ಲೋಕಾಯುಕ್ತ ಬಲೆಗೆ

Team Newsnap
1 Min Read

ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರುಪಾಕ್ಷಪ್ಪನ ಪುತ್ರನನ್ನು 40 ಲಕ್ಷ ರು ಲಂಚ ಪಡೆಯುವ ವೇಳೆ ಲೋಕಾಯುಕ್ತ ಪೋಲಿಸರು ಬಂಧಿಸಿದ್ದಾರೆ.

ಟೆಂಡರ್ ಕೊಡಿಸಲು ಲಂಚಕ್ಕೆ ಬೇಡಿಕೆ ಇಟ್ಟು, 40 ಲಕ್ಷ ಲಂಚದ ಹಣವನ್ನು ಸ್ವೀಕರಿಸುವ ವೇಳೆ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಗುರುವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಗುತ್ತಿಗೆದಾರರೊಬ್ಬರು ಕೆ ಎಸ್ ಡಿ ಎಲ್ ಗೆ ಕಚ್ಚಾ ವಸ್ತುಗಳನ್ನು ಪೂರೈಕೆ ಮಾಡಲು ಟೆಂಡರ್ ಗಾಗಿ ಅರ್ಜಿ ಸಲ್ಲಿಸಿದ್ದರು.

WhatsApp Image 2023 03 02 at 8.24.06 PM

ಈ ಗುತ್ತಿಗೆಯನ್ನು ಕೊಡಿಸುವುದಾಗಿ ಹೇಳಿ ಬೆಂಗಳೂರಿನ ಕ್ರೆಸೆಂಟ್ ರಸ್ತೆಯಲ್ಲಿನ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಹಾಗೂ ಬಿಡಬ್ಲ್ಯೂ ಎಸ್‌ಎಸ್ ಬಿ ಮುಖ್ಯ ಲೆಕ್ಕಾಧಿಕಾರಿಯಾಗಿ ಪ್ರಶಾಂತ್ 80 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ಈ ಸಂಬಂಧ ಲೋಕಾಯುಕ್ತ ಪೊಲೀಸರಿಗೆ ಗುತ್ತಿಗೆದಾರರು ದೂರು ನೀಡಿದ್ದರು.

ಗುರುವಾರ ಮುಂಗಡವಾಗಿ 40 ಲಕ್ಷ ಲಂಚದ ಹಣವನ್ನು ಬೆಂಗಳೂರಿನ ಕ್ರೆಸೆಂಟ್ ರಸ್ತೆಯಲ್ಲಿರುವಂತ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಕಚೇರಿಯಲ್ಲಿ ಪುತ್ರ ಪ್ರಶಾಂತ್ ಗೆ ನೀಡುವ ವೇಳೆ ಲೋಕಾಯುಕ್ತ ಪೊಲೀಸರು ದಿಢೀರ್ ದಾಳಿ ನಡೆಸಿ, 40 ಲಕ್ಷ ಹಣದೊಂದಿಗೆ ಶಾಸಕರ ಪುತ್ರನನ್ನು ಬಂಧಿಸಿದ್ದಾರೆ.ಇದನ್ನು ಓದಿ –ಕಾಂಗ್ರೆಸ್ ಗೆ ಪಲಾಯನ ಮಾಡಲು ಸಚಿವ ನಾರಾಯಣಗೌಡ ಸಿದ್ದತೆ

Share This Article
Leave a comment