January 10, 2025

Newsnap Kannada

The World at your finger tips!

narayana gowda

ಶಾಸಕ ಯತ್ನಾಳ್ ಕುಚೇಷ್ಠೆ , ಬ್ಲಾಕ್ ಮೇಲ್ ಮನುಷ್ಯ – ನಾರಾಯಣ ಗೌಡ ತಿರುಗೇಟು

Spread the love

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ಗೆ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿಎ ನಾರಾಯಣಗೌಡ ತಿರುಗೇಟು ನೀಡಿ, ಸವಾಲು ಹಾಕಿದ್ದಾರೆ.

ಯತ್ನಾಳ್ ಕನ್ನಡಪರ ಚಳವಳಿಗಾರರ ಕುರಿತು ಕುಚೇಷ್ಟೆಯ ಮಾತುಗಳನ್ನಾಡಿದ್ದಾರೆ. ಅವರು ಕನ್ನಡ ಚಳವಳಿಗಾರರ ಕುರಿತು ಏನೆಲ್ಲ ಮಾತುಗಳನ್ನು ಆಡಿದ್ದಾರೋ ಅದೆಲ್ಲವೂ ಅವರಿಗೇ ಅನ್ವಯಿಸುತ್ತದೆ.

ಬ್ಲಾಕ್ ಮೇಲ್ ಸಂಸ್ಕೃತಿ

ಸಚಿವ ಸ್ಥಾನ ಪಡೆಯಲು ಆಗಾಗ ತಮ್ಮ ಪಕ್ಷದ ಸರ್ಕಾರವನ್ನೇ ಬ್ಲಾಕ್ ಮೇಲ್ ಮಾಡಿಕೊಂಡು ಬಂದಿವರು ಯತ್ನಾಳ್. ಕಂಡ ಕಂಡವರಿಗೆ ಸವಾಲು ಎಸೆಯುವ ಯತ್ನಾಳ್ ಅವರಿಗೆ ಎರಡೇ ಎರಡು ಸವಾಲು ಕೊಡುತ್ತಿದ್ದೇನೆ. ಅವರಿಗೆ ನಿಜವಾಗಿಯೂ ತಾಕತ್ತಿದ್ದರೆ ಈ ಸವಾಲುಗಳನ್ನು ಸ್ವೀಕರಿಸಲಿ.

ಯತ್ನಾಳ್ ಗೆ ಸವಾಲು ಏನು?

1) ಯತ್ನಾಳ್ ಶಾಸಕರಾಗಿರುವ ಜಿಲ್ಲೆ ವಿಜಯಪುರವೂ ಸೇರಿದಂತೆ ಉತ್ತರ ಕರ್ನಾಟಕದಲ್ಲಿ ಸಂಭವಿಸಿದ ಭೀಕರ ನೆರೆ, ಭಾರೀ ಮಳೆಯಿಂದಾಗಿ ಸುಮಾರು 25,000 ಕೋಟಿ ರುಪಾಯಿ ನಷ್ಟವಾಗಿದ್ದು, ಕನಿಷ್ಠ 10,000 ಕೋಟಿ ರುಪಾಯಿಗಳನ್ನು ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಸ್ವತಃ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರೇ ಬೇಡಿಕೆ ಇಟ್ಟಿದ್ದಾರೆ. ಕೇಂದ್ರ ಸ್ಪಂದಿಸಿದ್ದು ಎಷ್ಟು? ಯತ್ನಾಳ್ ಪ್ರಯತ್ನ ಏನು?

2) ಕೇಂದ್ರ ಸರ್ಕಾರ ಕೊಟ್ಟಿರುವುದು ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆಯಂತೆ ಕೇವಲ 550 ಕೋಟಿ ರುಪಾಯಿ. ಬಿಜಾಪುರ ಜಿಲ್ಲೆಯಲ್ಲಿ ಎರಡು ಲಕ್ಷ ಎಕರೆಗೂ ಹೆಚ್ಚು ಕೃಷಿ ಭೂಮಿ, ಹತ್ತು ಸಾವಿರ ಎಕರೆಗೂ ಹೆಚ್ಚು ತೋಟಗಾರಿಕಾ ಭೂಮಿ ಹಾಳಾಗಿದೆ. ಈ ಕುರಿತಂತೆ ಯತ್ನಾಳ್ ರೈತರಿಗೆ ಹೇಗೆ ನೆರವಾಗಿದ್ದಾರೆ.

3) ರೈತರಿಗೆ ಪರಿಹಾರವಿಲ್ಲ, ಮನೆ ಕಳೆದುಕೊಂಡವರಿಗೆ ಪರಿಹಾರವಿಲ್ಲ. ಅಲ್ಪಸ್ವಲ್ಪ ಬಿಡುಗಡೆಯಾದ ಹಣವನ್ನೂ ಪುಡಾರಿಗಳು ನುಂಗಿ ನೀರು ಕುಡಿದಿದ್ದಾರೆ. ಗಂಜೀಕೇಂದ್ರಗಳಲ್ಲಿ ಮೂಲಭೂತ ಸೌಕರ್ಯವಿಲ್ಲದೆ ಸಂತ್ರಸ್ಥರು ಒದ್ದಾಡುತ್ತಿದ್ದಾರೆ. ಯತ್ನಾಳ್ ಗೆ ನಿಜವಾಗಿಯೂ ಜನಪರ ಕಾಳಜಿ ಇದ್ದರೆ, ತನ್ನ ಕ್ಷೇತ್ರದ ಮತದಾರರ ಹಿತ ಕಾಯುವ ಮನಸ್ಸಿದ್ದರೆ, ಕೇಂದ್ರ ಸರ್ಕಾರ ಯಾಕೆ ಹಣ ನೀಡುತ್ತಿಲ್ಲ ಎಂದು ಯತ್ನಾಳ್ ಪ್ರಶ್ನೆ ಮಾಡಿದ್ದಾರ? ಪ

4) ಜಿಎಸ್ ಟಿ ವ್ಯವಸ್ಥೆ ಜಾರಿ ಯಾದಾಗಿನಿಂದಲೂ ಕರ್ನಾಟಕ ಸರ್ಕಾರ ಲಕ್ಷಾಂತರ ಕೋಟಿ ರುಪಾಯಿ ಹಣವನ್ನು ಸಂಗ್ರಹಿಸಿ ಕೇಂದ್ರ ಸರ್ಕಾರಕ್ಕೆ ನೀಡುತ್ತಿದೆ. ಜಿಎಸ್ ಟಿ ವ್ಯವಸ್ಥೆ ಜಾರಿಯಾದ ಸಂದರ್ಭದಲ್ಲಿ ರಾಜ್ಯಗಳಿಗೆ ಆಗುವ ನಷ್ಟವಾಗುವ ಹಣವನ್ನು ಕೊಡುವ ವಾಗ್ದಾನವನ್ನು ಕೇಂದ್ರ ಸರ್ಕಾರ ನೀಡಿತ್ತು. ಆದರೆ ಕೇಂದ್ರ ಸರ್ಕಾರ ಮಾತು ಮುರಿದಿದೆ ಯಾಕೆ ಅಂತ ಪ್ರಶ್ನೆ ಮಾಡಿದ್ದಾರಾ?

5) ಪರಿಹಾರದ ಹಣ ನೀಡುತ್ತಿಲ್ಲ. ಬದಲಾಗಿ ರಿಸರ್ವ್ ಬ್ಯಾಂಕ್ ನಿಂದ ಸಾಲ ಪಡೆಯಿರಿ ಎಂದು ಹೇಳುತ್ತಿದೆ. ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯಗಳಿಗೆ ಹಣವಿಲ್ಲ. ಸರ್ಕಾರಿ ನೌಕರರಿಗೆ ಸಂಬಳ ಕೊಡಲೂ ಹಣವಿಲ್ಲ. ಇದೇ ಪರಿಸ್ಥಿತಿ ಮುಂದುವರೆದರೆ ಸರ್ಕಾರ ದಿವಾಳಿಯಾಗುವ ಸ್ಥಿತಿ ಇದೆ. ಈ ಎಲ್ಲಾ ಸಂಗತಿ ಯತ್ನಾಳ್ ಸಾಹೇಬ್ರಿಗೆ ಗೊತ್ತಾ?

6) ಯತ್ನಾಳ್ ಅವರಿಗೆ ನಿಜವಾಗಿಯೂ ಧೈರ್ಯ ಅನ್ನೋದೇನಾದರೂ ಇದ್ದರೆ ನಮ್ಮ ಹಣ ನಮಗೆ ಕೊಡಿ ಎಂದು ಮೋದಿ ಸರ್ಕಾರವನ್ನು ಕೇಳಲಿ, ಅದಕ್ಕಾಗಿ ಧರಣಿ‌ ಮಾಡಲಿ.

7 ) ಈ ಎಲ್ಲಾ ಕೆಲಸ ಮಾಡಲು ಯತ್ನಾಳ್ ಅವರಿಂದ ಸಾಧ್ಯವೇ? ಅಥವಾ ತಾವು ಹೈಕಮಾಂಡ್ ಗುಲಾಮಗಿರಿಯನ್ನೇ ಮಾಡುತ್ತೇವೆ, ಗುಲಾಮಗಿರಿ ಬಿಟ್ಟು ಬೇರೇನೂ ತಮಗೆ ಗೊತ್ತಿಲ್ಲ ಎಂದು ಒಪ್ಪಿಕೊಳ್ಳುತ್ತಾರೆಯೇ? ಎಂದು ನಾರಾಯಣಗೌಡರು ಪ್ರಶ್ನೆ ಮಾಡಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!