ಡಿಕೆಶಿ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಶಾಸಕ ಯತ್ನಾಳ್

Team Newsnap
1 Min Read

ಬೆಂಗಳೂರು: ರಾಜ್ಯ ಸರ್ಕಾರ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಡಿ.ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ ಸಿಬಿಐ ತನಿಖೆಗೆ ವಹಿಸಿದ್ದನ್ನು ಹಿಂಪಡೆದ ವಿವಾದ, ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಈಗಾಗಲೇ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಕಳೆದ ಸಚಿವ ಸಂಪುಟ ಸಭೆಯಲ್ಲಿ ಡಿಕೆಶಿ ಮೇಲಿನ ಕೇಸ್ ಸಂಬಂಧ ತೆಗೆದುಕೊಂಡ ನಿರ್ಧಾರದ ಬಗ್ಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗುಡುಗಿದ್ದರು. ಅಲ್ಲದೇ ತಾವು ಸರ್ಕಾರದ ಕ್ರಮವನ್ನು ಕೋರ್ಟ್ ನಲ್ಲಿ ಪ್ರಶ್ನಿಸೋದಾಗಿಯೂ ತಿಳಿಸಿದ್ದರು.

ಇದೀಗ ಅದರಂತೆ DCM ಡಿ.ಕೆ ಶಿವಕುಮಾರ್ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಸಿಬಿಐ ತನಿಖೆಗೆ ಒಪ್ಪಿಗೆ ಹಿಂಪಡೆದ ರಾಜ್ಯ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಮಧ್ಯಂತರ ಅರ್ಜಿಯನ್ನು ಸಲ್ಲಿಸಿದ್ದಾರೆ.ಬೆಂಗಳೂರು ನಗರ ಜಿಲ್ಲೆಯ ಸಂಕ್ಷಿಪ್ತ ಪರಿಚಯದ ಕವನ ಬೆಂಗಳೂರು ನಗರ

ಅರ್ಜಿಯಲ್ಲಿ ರಾಜ್ಯ ಸರ್ಕಾರದ ನಿರ್ಧಾರ ಕ್ರಮವಾಗಿಲ್ಲ. ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐಗೆ ನೀಡಲಾಗಿದ್ದಂತ ಡಿ.ಕೆ ಶಿವಕುಮಾರ್ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮವದ ಬಗ್ಗೆ ಸೂಕ್ತ ನಿರ್ದೇಶವನ್ನು ಸರ್ಕಾರಕ್ಕೆ ನೀಡುವಂತೆ ಕೋರಿದ್ದಾರೆ. ಈ ಮೂಲಕ ಡಿಕೆ ಶಿವಕುಮಾರ್ ಗೆ ಬಿಗ್ ಶಾಕ್ ಅನ್ನು ನೀಡಿದ್ದಾರೆ.

Share This Article
Leave a comment