ಸಿಎಂ ಸಿದ್ದು ಕೂಡ ಪುತ್ರನನ್ನು ಪರಿಷತ್ ಸದಸ್ಯರನ್ನಾಗಿ ಮಾಡಿ ರಾಜ್ಯ ರಾಜಕಾರಣದಲ್ಲಿ ನೆಲೆಯೂರುವಂತೆ ಮಾಡಲು ಸಿದ್ದರಾಮಯ್ಯ ನಿರ್ಧರಿಸಿದ್ದಾರಂತೆ.
ಅಪ್ಪನಿಗಾಗಿ ಮಗ ಡಾ. ಯತೀಂದ್ರ ವರುಣಾ ಕ್ಷೇತ್ರವನ್ನು ತ್ಯಾಗ ಮಾಡಿದ ಬೆನ್ನಲ್ಲೇ, ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕೊಡಗು-ಮೈಸೂರು ಕ್ಷೇತ್ರದಿಂದ ಸ್ಪರ್ಧೆಗೆ ಇಳಿಸುತ್ತಾರೆ ಎಂಬ ಮಾತುಗಳು ಕೇಳಿ ಬಂದವು
ಆದರೆ ಯತೀಂದ್ರ ಅವರಿಗೆ ಲೋಕಸಭೆ ಚುನಾವಣೆಯಲ್ಲಿ ಆಸಕ್ತಿ ಇಲ್ಲ. ಹೀಗಾಗಿ ಅವರನ್ನು ಎಂಎಲ್ಸಿ ಮಾಡಲು ಬಯಸಿರುವ ಸಿಎಂ ದೆಹಲಿ ರಾಜಕೀಯ ಬೇಡ ಎಂಬ ನಿರ್ಧಾರಕ್ಕೆ ಅವರು ಬಂದಿದ್ದಾರೆ ಎನ್ನಲಾಗಿದೆ.
ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯರ ಗೆಲುವಿನ ಹಿಂದೆ ಯತೀಂದ್ರ ಪಾತ್ರ ಪ್ರಮುಖವಾಗಿದೆ.
ಸಿದ್ದರಾಮಯ್ಯರ ಅನುಪಸ್ಥಿತಿಯಲ್ಲೂ ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಮಾಡಿದ ಅನುಭವ ಇದೆ. ಈಗ ಶಾಸಕರಾಗದ ಕಾರಣ ಪಕ್ಷದಲ್ಲಿ ಕಾಣಿಸಿಕೊಳ್ಳಲಾಗದ ಪರಿಸ್ಥಿತಿ ಎದುರಾಗಿದೆ. ಕ್ಷೇತ್ರದಲ್ಲಿ ಅಥವಾ ಪಕ್ಷದಲ್ಲಿ ಗುರುತಿಸಿಕೊಂಡರೆ ಸಿಎಂ ಮಗ, ಅದಕ್ಕೆ ಓಡಾಡ್ತಿದ್ದಾರೆ ಎಂಬ ಮಾತುಗಳು ಕೇಳಿಬರಬಹುದು. UPSC ನೇಮಕಾತಿ 2023 : 261 ಜೂನಿಯರ್ ಟ್ರಾನ್ಸ್ಲೇಷನ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಈ ರೀತಿಯ ಮಾತುಗಳು ಕೇಳಿಬರೋದು ಬೇಡ ಎಂದೇ, ಪರಿಷತ್ ಸದಸ್ಯರನ್ನಾಗಿ ಮಾಡುವ ಲೆಕ್ಕಚಾರದಲ್ಲಿ ಸಿದ್ದರಾಮಯ್ಯ ಇದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯರ ಬೇಡಿಕೆಗೆ ಅಸ್ತು ಅಂದರೆ, ಯತೀಂದ್ರಗೆ ಪರಿಷತ್ ಸ್ಥಾನ ಸಿಗುವುದು ಗ್ಯಾರೆಂಟಿ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು