ಡಿಸೆಂಬರ್ 10 ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಮಂಡ್ಯದಿಂದ ಸ್ಪರ್ಧೆ ಮಾಡಿರುವ ಬಿಜೆಪಿ ಅಭ್ಯರ್ಥಿ ಬೂಕಹಳ್ಳಿ ಮಂಜು ಮಂಡ್ಯ ಸಂಸದೆ ಸುಮಲತಾ ಅವರನ್ನು ಭೇಟಿ ಮಾಡಿ ಬೆಂಬಲ ಕೋರಿ ಮನವಿ ಮಾಡಿದರು
ಬೆಂಗಳೂರಿನ ಸಂಸದೆ ಸುಮಲತಾ ಅಂಬರೀಶ್ ನಿವಾಸಕ್ಕೆ ಭೇಟಿ ನೀಡಿದ್ದ ಬೂಕಹಳ್ಳಿ ಮಂಜು ಅವರಿಗೆ ಸಚಿವ ಕೆ.ಸಿ.ನಾರಾಯಣ್ ಗೌಡ ಹಾಗೂ ಬಿಜೆಪಿ ಮುಖಂಡರು ಸಾಥ್ ನೀಡಿದ್ದರು.
ಈ ವೇಳೆ ಪರಿಷತ್ ಚುನಾವಣೆಯಲ್ಲಿ ಬೆಂಬಲಿಸುವಂತೆ ಸಂಸದೆಗೆ ಮನವಿ ಮಾಡಿದರು. ಈ ವೇಳೆ ಸುಮಲತಾ ಅವರು ಬೂಕಹಳ್ಳಿ ಮಂಜು ಅವರಿಗೆ ಶುಭ ಹಾರೈಸಿದರು.
ಅಡ್ಡಗೋಡೆ ಮೇಲೆ ದೀಪ :
ಮಂಡ್ಯದಲ್ಲಿ ಸುಮಲತಾ ಕಾಂಗ್ರೆಸ್ಗೆ ಅಥವಾ ಬಿಜೆಪಿಗೆ ಬೆಂಬಲ ನೀಡುತ್ತಾರಾ ಎಂಬ ಕುತೂಹಲಕ್ಕೆ ಸಂಸದೆ ಈಗಾಗಲೇ ತೆರೆ ಎಳೆದಿದ್ದಾರೆ.
ನನಗೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಬೆಂಬಲ ನೀಡಿದ್ದಾರೆ. ಆದ್ದರಿಂದ ನಾನು ಇಂತಹ ಪಕ್ಷಕ್ಕೆ ಬೆಂಬಲ ನೀಡುತ್ತೀನಿ ಅಂತ ಹೇಳಲಾರೆ. ಅದು ಕೆಲವರಿಗೆ ನೋವಾಗುತ್ತದೆ. ಆದ್ದರಿಂದ ನಾನು ಈ ಬಗ್ಗೆ ತಟಸ್ಥವಾಗಿರುತ್ತೇನೆ ಎಂದರು
ಆದರೆ ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ಯಾರು ಸೂಕ್ತ ಎನಿಸುತ್ತಾರೆ ಅಂತ ಅಭ್ಯರ್ಥಿಗೆ ಬೆಂಬಲ ನೀಡುತ್ತೇನೆ ಎಂದು ಸ್ಪಷ್ಟಪಡಿಸಿದ್ದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಸಪ್ತಪದಿ ತುಳಿದ ಮೂರೇ ದಿನದಲ್ಲಿ ಹೃದಯಾಘಾತದಿಂದ ನವವಿವಾಹಿತ ಅಕಾಲಿಕ ಸಾವು
ಏ.7 ಕ್ಕೆ ಮೇಲುಕೋಟೆ ವೈರಮುಡಿ ಉತ್ಸವ
ಮಂಡ್ಯದಲ್ಲಿ ಭೀಕರ ಅಪಘಾತ: ಸಾಫ್ಟ್ವೇರ್ ಇಂಜಿನಿಯರ್ ದಾರುಣ ಸಾವು