Mandya

MLC ಚುನಾವಣೆ: ಸಂಸದೆ ಸುಮಲತಾ ಭೇಟಿ ಮಾಡಿದ ಬಿಜೆಪಿ ಅಭ್ಯರ್ಥಿ- ಬೆಂಬಲಕ್ಕೆ ಬೇಡಿಕೆ

ಡಿಸೆಂಬರ್ 10 ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಮಂಡ್ಯದಿಂದ ಸ್ಪರ್ಧೆ ಮಾಡಿರುವ ಬಿಜೆಪಿ ಅಭ್ಯರ್ಥಿ ಬೂಕಹಳ್ಳಿ ಮಂಜು ಮಂಡ್ಯ ಸಂಸದೆ ಸುಮಲತಾ ಅವರನ್ನು ಭೇಟಿ ಮಾಡಿ ಬೆಂಬಲ ಕೋರಿ ಮನವಿ ಮಾಡಿದರು

ಬೆಂಗಳೂರಿನ ಸಂಸದೆ ಸುಮಲತಾ ಅಂಬರೀಶ್ ನಿವಾಸಕ್ಕೆ ಭೇಟಿ ನೀಡಿದ್ದ ಬೂಕಹಳ್ಳಿ ಮಂಜು ಅವರಿಗೆ ಸಚಿವ ಕೆ.ಸಿ.ನಾರಾಯಣ್ ಗೌಡ ಹಾಗೂ ಬಿಜೆಪಿ ಮುಖಂಡರು ಸಾಥ್ ನೀಡಿದ್ದರು.

ಈ ವೇಳೆ ಪರಿಷತ್​​ ಚುನಾವಣೆಯಲ್ಲಿ ಬೆಂಬಲಿಸುವಂತೆ ಸಂಸದೆಗೆ ಮನವಿ ಮಾಡಿದರು. ಈ ವೇಳೆ ಸುಮಲತಾ ಅವರು ಬೂಕಹಳ್ಳಿ ಮಂಜು ಅವರಿಗೆ ಶುಭ ಹಾರೈಸಿದರು.

ಅಡ್ಡಗೋಡೆ ಮೇಲೆ ದೀಪ :

ಮಂಡ್ಯದಲ್ಲಿ ಸುಮಲತಾ ಕಾಂಗ್ರೆಸ್​​ಗೆ ಅಥವಾ ಬಿಜೆಪಿಗೆ ಬೆಂಬಲ ನೀಡುತ್ತಾರಾ ಎಂಬ ಕುತೂಹಲಕ್ಕೆ ಸಂಸದೆ ಈಗಾಗಲೇ ತೆರೆ ಎಳೆದಿದ್ದಾರೆ.

ನನಗೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಹಾಗೂ ಕಾಂಗ್ರೆಸ್​ ಪಕ್ಷದ ಕಾರ್ಯಕರ್ತರು ಬೆಂಬಲ ನೀಡಿದ್ದಾರೆ. ಆದ್ದರಿಂದ ನಾನು ಇಂತಹ ಪಕ್ಷಕ್ಕೆ ಬೆಂಬಲ ನೀಡುತ್ತೀನಿ ಅಂತ ಹೇಳಲಾರೆ. ಅದು ಕೆಲವರಿಗೆ ನೋವಾಗುತ್ತದೆ. ಆದ್ದರಿಂದ ನಾನು ಈ ಬಗ್ಗೆ ತಟಸ್ಥವಾಗಿರುತ್ತೇನೆ ಎಂದರು

ಆದರೆ ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ಯಾರು ಸೂಕ್ತ ಎನಿಸುತ್ತಾರೆ ಅಂತ ಅಭ್ಯರ್ಥಿಗೆ ಬೆಂಬಲ ನೀಡುತ್ತೇನೆ ಎಂದು ಸ್ಪಷ್ಟಪಡಿಸಿದ್ದರು.

Team Newsnap
Leave a Comment
Share
Published by
Team Newsnap

Recent Posts

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 6, 2024

ಹಾಸನ ಅಶ್ಲೀಲ ವಿಡಿಯೋಗಳನ್ನು ಹಂಚುವುದು ಶಿಕ್ಷಾರ್ಹ ಅಪರಾಧ: ಎಸ್‌ಐಟಿ

ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More

May 6, 2024

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024

ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು

ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More

May 5, 2024

ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More

May 4, 2024