ಚಾಮುಂಡಿ ಬೆಟ್ಟದಲ್ಲಿ ಮೊಬೈಲ್‌ ಬಳಕೆ ನಿಶೇಧ

Team Newsnap
1 Min Read

ಮೈಸೂರು: ನಾಡಿನ ಅಧಿ ದೇವತೆಯ ಸನ್ನಿಧಿಯಾಗಿರುವಂತ ಚಾಮುಂಡಿ ಬೆಟ್ಟದಲ್ಲಿ ಮೊಬೈಲ್ ಬಳಕೆಗೆ ನಿಷೇಧವನ್ನು ಹೇರಲಾಗಿದೆ.

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಚಾಮುಂಡಿ ಬೆಟ್ಟದ ಅಭಿವೃದ್ಧಿಗಾಗಿ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರವನ್ನು ರಚಿಸಲಾಗಿದೆ.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಚಾಮುಂಡಿ ಬೆಟ್ಟದಲ್ಲಿ ಭಕ್ತಾಧಿಗಳಿಗೆ ಸೌಲಭ್ಯವನ್ನು ಒದಗಿಸುವ ದೃಷ್ಠಿಯಿಂದ ಪ್ರಾಧಿಕಾರವನ್ನು ರಚಿಸಲಾಗಿದೆ ಎಂದರು.

ದಸರಾ ಸಂದರ್ಭದಲ್ಲಿ ವಿವಿಧ ಭಾಗಗಳಿಂದ ಜನರು ಆಗಮಿಸಲಿದ್ದು ,ಭಕ್ತರಿಗೆ ಸೌಲಭ್ಯ ಒದಗಿಸಿಕೊಡಬೇಕಿದೆ. ಸ್ವಚ್ಥತೆ ಬಗ್ಗೆ ಗಮನ ಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದಂತ ಮುಖ್ಯಮಂತ್ರಿ ಅವರು, ಸುರಕ್ಷತೆಯ ದೃಷ್ಠಿಯಿಂದ ಸಿಸಿಟಿವಿ ಅಳವಡಿಕೆಗೂ ಸೂಚಿಸಿದ್ದಾರೆ.

ಅಪರಾಧಗಳನ್ನು ತಡೆಗಟ್ಟುವ ಸಲುವಾಗಿ ಟಾಸ್ಕ್ ಪೋರ್ಸ್ ರಚನೆ ಮಾಡಲಾಗುತ್ತದೆ ಹಾಗು ಚಾಮುಂಡಿ ಬೆಟ್ಟದಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಿಸಲಾಗಿದೆ.ಮೈಸೂರು-ಬೆಂಗಳೂರು ಎಕ್ಸ್​​ಪ್ರೆಸ್ ವೇ : 2 ಲಕ್ಷಕ್ಕೂ ಹೆಚ್ಚು ವಾಹನ ಸವಾರರಿಂದ ನಿಯಮ ಉಲ್ಲಂಘನೆ

ಸ್ವಚ್ಛತೆಗೆ ಆದ್ಯತೆ ನೀಡುವ ಸಲುವಾಗಿ ಧೂಮಪಾನ, ಮಧ್ಯಪಾನ, ಗುಟ್ಕಾ ನಿಷೇಧಿಸಲಾಗಿದೆ ಮತ್ತು ಚಾಮುಂಡಿ ತಾಯಿಯ ದರ್ಶನದ ವೇಳೆಯಲ್ಲಿ ಮೊಬೈಲ್ ಬಳಕೆ ನಿಷೇಧಿಸಲಾಗಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತಿಳಿಸಿದರು.

Share This Article
Leave a comment