ಬೆಂಗಳೂರು :
ಆಗಸ್ಟ್ 23ರಂದು ಚಂದ್ರಯಾನ ಯಶಸ್ವಿಯಾದ ದಿನವನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಘೋಷಿಸಿದರು.
ಚಂದ್ರಯಾನ-3 ಯಶಸ್ಸಿನಲ್ಲಿ ಇಸ್ರೋ ಸಾಧನೆ ದೊಡ್ಡದು. ಮೇಕ್ ಇನ್ ಇಂಡಿಯಾ ಈಗ ಚಂದ್ರನವರೆಗೂ ತಲುಪಿದೆ ಎಂದು ಖುಷಿಯಿಂದ ಮುಕ್ತಕಂಠದಿಂದ ಇಸ್ರೊ ವಿಜ್ಞಾನಿಗಳನ್ನು ಶ್ಲಾಘಿಸಿ ಬೆಂಗಳೂರಿನ ಇಸ್ರೊ ಕಚೇರಿಯಲ್ಲಿ ಘೋಷಿಸಿದರು.
ಈ ಯಶಸ್ಸು ಭಾರತದ ವೈಜ್ಞಾನಿಕ ಶಂಕನಾದವಾಗಿದೆ. ಚಂದ್ರಯಾನದಿಂದ ಮನುಕುಲ ಅಭಿವೃದ್ಧಿ ಸಾಧ್ಯವಿದೆ. ಹಿಮಾಲಯದಿಂದ ಕನ್ಯಾಕುಮಾರಿ ವರೆಗೂ ಜೋಡಿಸುವ ಸಾಮರ್ಥ್ಯ ಇದೆ. ಶಿವನಲ್ಲಿ ಮಾನವನ ಅಭಿವೃದ್ಧಿ ಇದೆ. ಚಂದ್ರಯಾನ-3 ರ ಯಶಸ್ಸಿನಿಂದಾಗಿ ಮೇಕ್ ಇನ್ ಇಂಡಿಯಾದ ಮೇಲೆ ಬಲವಾದ ನಂಬಿಕೆ ಮೂಡುತ್ತಿದೆ ಎಂದು ಮೋದಿ ಹೇಳಿದರು.
ಆಗಸ್ಟ್ 23 ರ ಆ ದಿನ ನನ್ನ ಕಣ್ಣ ಮುಂದೆ ಪ್ರತಿ ಸೆಕೆಂಡ್ ಮತ್ತೆ ಮತ್ತೆ ತಿರುಗುತ್ತಿದೆ, ನಿಮ್ಮ ಸಾಧನೆಯನ್ನು ಎಷ್ಟೇ ಕೊಂಡಾಡಿದರೂ ಅದು ಕಡಿಮೆಯೇ. ಚಂದ್ರನ ಮೇಲೆ ಪ್ರಜ್ಞಾನ್ ಪರಾಕ್ರಮ ಕಂಡು ಖುಷಿಯಾಗಿದೆ. ಇಡೀ ವಿಶ್ವವೇ ಭಾರತದ ವಿಜ್ಞಾನ, ತಂತ್ರಜ್ಞಾನವನ್ನು ಒಪ್ಪಿಕೊಂಡಿದೆ ಎಂದು ಪ್ರಧಾನಿ ಮೋದಿ ಹೇಳಿದರು.
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
- ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
More Stories
MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ