ನ್ಯೂಸ್ ಸ್ನ್ಯಾಪ್
ನವದೆದಲಿ ಹೊಸ ಶಿಕ್ಷಣ ನೀತಿಯಲ್ಲಿ ಆತ್ಮ ನಿರ್ಭರ ಭಾರತ ನಿರ್ಮಾಣವೇ ಪ್ರಮುಖ ಗುರಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದರು.
ರಾಷ್ಟ್ರೀಯ ಶಿಕ್ಷಣ ನೀತಿಯ ಗವರ್ನರ್ ಸಮ್ಮೇಳನದ ವರ್ಚುಯಲ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪ್ರಧಾನಿ ಮೋದಿ ಈ ಹೊಸ ಶಿಕ್ಷಣ ವ್ಯವಸ್ಥೆಯಲ್ಲಿ ಮಾತ್ರ ಸ್ಥಳೀಸಂಸ್ಥೆಗಳಿಂದ ಹಿಡಿದು ಕೇಂದ್ರ ಸರ್ಕಾರದವರೆಗೂ ಎಲ್ಲರೂ ಕೂಡ ಜವಾಬ್ದಾರರಾಗಿದ್ದಾರೆ. ಆದರೆ ಶಿಕ್ಷಣ ನೀತಿಯಲ್ಲಿ ಮಾತ್ರ ಸರ್ಕಾರ ಮಧ್ಯ ಪ್ರವೇಶ ಹಾಗೂ ಪರಿಣಾಮಗಳು ಯಾವತ್ತಿಗೂ ಸೀಮಿತವಾಗಿರುತ್ತವೆ ಎಂದರು. ನಮ್ಮ ದೇಶದಲ್ಲಿ ಬಹು ಹಿಂದೆ ಶಿಕ್ಷಣ ನೀತಿ ಜಾರಿಗೆ ಬಂದಿತ್ತು. ನಂತರ 1986 ರಲ್ಲಿ ಹೊಸ ನೀತಿ ಜಾರಿಗೆ ಬಂದಿತ್ತು. ಈಗ 34 ವರ್ಷಗಳ ನಂತರ ರಾಷ್ಟ್ರೀಯ ಶಿಕ್ಷಣ ನೀತಿ 2020 ಜಾರಿಗೆ ತರಲಾಗಿದೆ. ಹೊಸ ನೀತಿಯ ಅನ್ವಯ ಪೋಷಕರು ಹಾಗೂ ಶಿಕ್ಷಕರ ಪಾಲ್ಗೊಳ್ಳುವಿಕೆ ಹೆಚ್ಚಿರುತ್ತದೆ. ವಿದ್ಯಾರ್ಥಿಗಳು ಹೆಚ್ಚು ಸಂಬಂಧ ಹಾಗೂ ಸಂಪರ್ಕ ಇಟ್ಟುಕೊಂಡಿರುತ್ತಾರೆ. ಮಾತ್ರವಲ್ಲ ಜನರ ಆಶೋತ್ತರಗಳನ್ನು ಈಡೇರಿಸುವಲ್ಲಿ ಹೊಸ ಶಿಕ್ಷಣ ನೀತಿ ಪೂರಕವಾಗಿದೆ ಎಂದು ಹೇಳಿದರು. ಈಗ ಅನುಷ್ಠಾನಗೊಳ್ಳುವ ನೀತಿಯಿಂದ ಉನ್ನತ ಶಿಕ್ಷಣದಲ್ಲಿ ಬಹುದೊಡ್ಡ ಬದಲಾವಣೆ ಬರುತ್ತದೆ. ಸಂಶೋಧನೆ ಹಾಗೂ ಬಹು ಶಿಸ್ತಿನ ವಿಧಾನದ ಮಹತ್ವವೂ ಕೂಡ ವಿದ್ಯಾರ್ಥಿಗಳ ಅರಿವಿಗೆ ಬರಲಿದೆ ಎಂದು ತಿಳಿಸಿದರು.ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ಕೋವಿಂದ್ ಆಶಯ ಭಾಷಣ ಮಾಡಿದರು. ದೇಶದ ಎಲ್ಲಾ ರಾಜ್ಯಪಾಲರು, ವಿವಿ ಕುಲಪತಿಗಳು ಹಾಗೂ ಶಿಕ್ಷಣ ತಜ್ಞರು, ಅಧಿಕಾರಿಗಳು
ಪಾಲ್ಗೊಂಡಿದ್ದರು.
More Stories
ವಿರಾಟ್ ಕೊಹ್ಲಿಗೆ ಬಿಬಿಎಂಪಿ ನೋಟಿಸ್
ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ
2025ರಿಂದ ಕ್ಯಾನ್ಸರ್ ಲಸಿಕೆ ಉಚಿತ ವಿತರಣೆ: ಮಹತ್ವದ ವೈದ್ಯಕೀಯ ಸಾಧನೆ