ಮೋದಿ ಸಚಿವ ಸಂಪುಟ ಕ್ಕೆ ಜುಲೈ ಮೊದಲ ಭಾರಿ ಸರ್ಜರಿ – 27 ಮಂದಿಗೆ ಮಂತ್ರಿ ಯೋಗ ?

Team Newsnap
1 Min Read

ಜುಲೈ ಮೊದಲ ವಾರದಲ್ಲಿ ಕೇಂದ್ರ ಸಚಿವ ಸಂಪುಟ ಪುನರ್‌ ರಚನೆಯಾಗಲಿದೆ. ಈ ವೇಳೆ
ಕೆಲ ಸಚಿವರನ್ನು ಕೈಬಿಡುವ ಸಾಧ್ಯತೆಯಿದೆ.

ಪ್ರಧಾನಿ ಮೋದಿ ಕೆಲ ಸಚಿವರನ್ನು ಕೈಬಿಟ್ಟು 27 ಹೊಸ ಮುಖಗಳಿಗೆ ಮಂತ್ರಿ ಸ್ಥಾನ ನೀಡಲು ಮುಂದಾಗಿದ್ದಾರೆ.

ಸಂಭಾವ್ಯ ಪಟ್ಟಿ ಹೀಗಿದೆ :
  • ಕಾಂಗ್ರೆಸ್ ತೊರೆದು ಬಿಜೆಪಿ ಸೇರಿಕೊಂಡ ಮಧ್ಯಪ್ರದೇಶದ ಜ್ಯೋತಿರಾದಿತ್ಯ ಸಿಂಧಿಯಾ
  • ಬಿಹಾರದ ಮಾಜಿ ಉಪಮುಖ್ಯ ಮಂತ್ರಿ ಸುಶೀಲ್ ಮೋದಿ
  • ರಾಜಸ್ಥಾನ ಹಾಗೂ ಮಧ್ಯಪ್ರದೇಶದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಭೂಪೇಂದ್ರ ಯಾದವ್ ಹಾಗೂ ಕೈಲಾಶ್ ವಿಜಯವರ್ಗಿಯಾ, ಬಿಜೆಪಿ ವಕ್ತಾರ ಹಾಗೂ ಅಲ್ಪ ಸಂಖ್ಯಾತ ಮುಖಂಡ ಝಪರ್ ಇಸ್ಲಾಂ
  • ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ನಾರಾಯಣ ರಾಣೆ
  • ಅಸ್ಸಾಂ ಮಾಜಿ ಮುಖ್ಯಮಂತ್ರಿ ಸರ್ಬಾನಂದ ಸೋನವಾಲ
  • ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಅಲ್ಲಿನ ನಾಯಕರಿಗೆ ಜಾಸ್ತಿ ಅವಕಾಶ ಸಿಗುವ ಸಾಧ್ಯತೆಯಿದೆ.
  • ಉತ್ತರ ಪ್ರದೇಶ ಬಿಜೆಪಿ ಅಧ್ಯಕ್ಷ ಸ್ವತಂತ್ರ ದೇವ್ ಸಿಂಗ್, ಮಹಾರಾಜ ಗಂಜ್ ಸಂಸದ ಪಂಕಜ್ ಚೌಧರಿ, ವರುಣ್ ಗಾಂಧಿ ಹಾಗೂ ಓಆಂ ಮೈತ್ರಿ ಪಕ್ಷದ ಅನುಪ್ರಿಯಾ ಪಟೇಲ್
  • ಒಡಿಶಾ ಸಂಸದ ಅಶ್ವಿನ್ ವೈಷ್ಣವ್
  • ಬಂಗಾಳದ ಮಾಜಿ ರೈಲ್ವೇ ಸಚಿವ ದಿನೇಶ್ ತ್ರಿವೇದಿ ರಾಜ್ಯ ಸಭಾ ಸದಸ್ಯ ಅನಿಲ್ ಜೈನ್
  • ರಾಜಸ್ಥಾನದಿಂದ ಕಿರಿಯ ಸಂಸದ ಚೌಧರಿ, ರಾಹುಲ್ ಕಸ್ವಾನ್ ಮತ್ತು ಸಿಕಾರ್ ಸಂಸದ ಸುಮೇಧಾನಂದ ಸರಸ್ವತಿ
  • ದೆಹಲಿಯಿಂದ ಸಂಸದೆ ಮೀನಾಕ್ಷಿ ಲೇಖಿ
  • ಬಿಹಾರದಲ್ಲಿ ಚಿರಾಗ್ ಪಾಸ್ವಾನ್ ವಿರುದ್ಧ ದಂಗೆ ಎದ್ದ ಪಶುಪತಿ ಪರಾಸ್
  • ಜೆಡಿಯು ನಾಮನಿರ್ದೇಶನಗಳಾದ ಆರ್.ಸಿ.ಪಿ. ಸಿಂಗ್ ಮತ್ತು ಸಂತೋಷ್ ಕುಮಾರ್ ಕೂಡ ಸಂಭಾವ್ಯ ಪಟ್ಟಿಯಲ್ಲಿದ್ದಾರೆ.
Share This Article
Leave a comment