November 15, 2024

Newsnap Kannada

The World at your finger tips!

food , security , Yojana

ರೈತ ಹೋರಾಟಕ್ಕೆ ಮಣಿದ ಮೋದಿ ಸರ್ಕಾರ; 3 ಕೃಷಿ ಕಾಯ್ದೆಗಳು ವಾಪಸ್ಸು-ಪ್ರಧಾನಿ ಘೋಷಣೆ

Spread the love

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ 3 ಕೃಷಿ ಕಾನೂನುಗಳನ್ನು ಹಿಂದಕ್ಕೆ ಮಹತ್ವದ ನಿರ್ಧಾರವನ್ನು ಪ್ರಕಟಿಸಿದೆ.

ರೈತರಿಂದ ಭಾರೀ ವಿರೋಧಕ್ಕೆ ಕಾರಣವಾಗಿದ್ದ ಮೂರು ಕೃಷಿ ಕಾಯ್ದೆಗಳನ್ನ ಕೇಂದ್ರ ಸರ್ಕಾರ ಡಿಸೆಂಬರ್ ನಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ವಾಪಸ್ ಪಡೆದುಕೊಳ್ಳುವ ನಿಧಾ೯ರ ಪ್ರಕಟಿಸಿದೆ.

ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ.. ಎಲ್ಲಾ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸಲು ಸರ್ಕಾರ ನಿರ್ಧರಿಸಿದೆ.

ನಮ್ಮ ಸರ್ಕಾರವು ರೈತರ ಕಲ್ಯಾಣಕ್ಕಾಗಿ ಅದರಲ್ಲೂ ವಿಶೇಷವಾಗಿ ಸಣ್ಣ ರೈತರ ಕಲ್ಯಾಣಕ್ಕಾಗಿ, ದೇಶದ ಕೃಷಿ ಹಿತದೃಷ್ಟಿಯಿಂದ, ದೇಶದ ಹಿತದೃಷ್ಟಿಯಿಂದ, ಬಡವರ ಉಜ್ವಲ ಭವಿಷ್ಯಕ್ಕಾಗಿ, ಸಂಪೂರ್ಣ ಪ್ರಾಮಾಣಿಕತೆಯಿಂದ ಒಳ್ಳೆಯ ಉದ್ದೇಶದಿಂದ ಈ ಕಾನೂನನ್ನು ತಂದಿದ್ದೇವು. 

ಆದರೆ ರೈತರ ಅನುಕೂಲಕ್ಕಾಗಿ ನಾವು ಪ್ರಯತ್ನಿಸಿದರೂ ಅದನ್ನು ಕೆಲವು ರೈತರಿಗೆ ವಿವರಿಸಲು ಸಾಧ್ಯವಾಗಲಿಲ್ಲ. ಹಾಗಾಗಿ ನಾವು ಎಲ್ಲಾ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸಲು ನಿರ್ಧರಿಸಿದ್ದೇವೆ ಎಂದರು.

ನನ್ನ ಐದು ದಶಕಗಳ ಜೀವನದಲ್ಲಿ ರೈತರ ಸವಾಲುಗಳನ್ನು ಬಹಳ ಹತ್ತಿರದಿಂದ ನೋಡಿದ್ದೇನೆ. 2014 ರಿಂದ ಪ್ರಧಾನ ಸೇವಕರಾಗಿ ಸೇವೆ ಸಲ್ಲಿಸಲು ಅವಕಾಶವನ್ನು ಮಾಡಿಕೊಟ್ಟಿದ್ದಾರೆ. ನಾವು ಕೃಷಿ, ರೈತರನ್ನು ಅಭಿವೃದ್ಧಿಪಡಿಸಿದ್ದೇವೆ. ರೈತರ ಕಲ್ಯಾಣಕ್ಕೆ ಆದ್ಯತೆ ನೀಡಲಾಗಿದೆ ಎಂದು ತಮ್ಮ ಭಾಷಣದಲ್ಲಿ ತಿಳಿಸಿದರು.

ಇಂದು ಗುರುನಾನಕ್ ದೇವ್ ಜಿ ಅವರ ಪವಿತ್ರ ಹಬ್ಬ. ಈ ಸಂದರ್ಭದಲ್ಲಿ ನಾನು ದೇಶವಾಸಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ. ಒಂದೂವರೆ ವರ್ಷಗಳ ಬಳಿಕ ಕರ್ತಾರ್‌ಪುರ ಕಾರಿಡಾರ್ ಪುನರಾರಂಭಗೊಂಡಿರುವುದು ತುಂಬಾ ಸಂತಸ ತಂದಿದೆ ಎಂದರು.

  • ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ ಕಾಯ್ದೆ-2020
  • ರೈತರ ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ-2020
  • ಅಗತ್ಯ ಸರಕುಗಳ ತಿದ್ದುಪಡಿ ಕಾಯ್ದೆ-2020
Copyright © All rights reserved Newsnap | Newsever by AF themes.
error: Content is protected !!