ಕೊಚ್ಚಿ-ಮಂಗಳೂರು ನೈಸರ್ಗಿಕ ಅನಿಲ ಪೈಪ್ ಲೈನ್ ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ

Team Newsnap
1 Min Read

ಕೊಚ್ಚಿ-ಮಂಗಳೂರು ನೈಸರ್ಗಿಕ ಅನಿಲ ಪೈಪ್ ಲೈನ್ ಅನ್ನು ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಲೋಕಾರ್ಪಣೆ ಮಾಡಿದರು.‌

ಕೇರಳದ ಕೊಚ್ಚಿಯಿಂದ ಕರ್ನಾಟಕದ ಮಂಗಳೂರಿಗೆ ನೈಸರ್ಗಿಕ ಅನಿಲ ಪೂರೈಸುವ ಪೈಪ್ಲೈನ್ ಅನ್ನು ಗೈಲ್ ಇಂಡಿಯಾ ನಿರ್ಮಿಸಿದೆ.

2009ರಲ್ಲೇ ಇದರ ನಿರ್ಮಾಣ ಕಾಮಗಾರಿ ಆರಂಭವಾಗಿತ್ತು. ಸುಮಾರು 3,000 ಕೋಟಿ ರು ವೆಚ್ಚದಲ್ಲಿ ನಿರ್ಮಾಣವಾದ 450 ಕಿ.ಮೀ ಉದ್ದದ ಪೈಪ್ಲೈನ್ ಮೂಲಕ ದಿನಕ್ಕೆ 12 ಮಿಲಿಯನ್ ಮೆಟ್ರಿಕ್ ಸ್ಟ್ಯಾಂಡರ್ಡ್ ಕ್ಯೂಬಿಕ್ ಮೀಟರ್ ಅನಿಲವನ್ನು ಸಾಗಿಸುವ ಸಾಮರ್ಥ್ಯ ಹೊಂದಿದೆ.

PM Modi said the Kochi Mangalore gas pipeline would be easy

ನೈಸರ್ಗಿಕ ಅನಿಲ ಪೈಪ್ಲೈನ್ ಲೋಕಾರ್ಪಣೆಗೊಳಿಸಿದ ಬಳಿಕ ಮಾತನಾಡಿರುವ ಪ್ರಧಾನಿ ಮೋದಿಯವರು, 450 ಕಿ.ಮೀ ಉದ್ದದ ನೈಸರ್ಗಿಕ ಪೈಪ್‌ಲೈನ್ ಅನ್ನು ರಾಷ್ಟ್ರಕ್ಕೆ ಲೋಕಾರ್ಪಣೆ ಮಾಡುತ್ತಿರುವುದು ಗೌರವದ ವಿಚಾರ ಎಂದರು.‌

Share This Article
Leave a comment