ಜನವರಿ 12ರಂದು ಹುಬ್ಬಳ್ಳಿಗೆಮೋದಿ: ಭರದ ಸಿದ್ಧತೆ

Team Newsnap
1 Min Read
Modi to Hubballi on January 12: Preparations for the rush ಜನವರಿ 12ರಂದು ಹುಬ್ಬಳ್ಳಿಗೆಮೋದಿ: ಭರದ ಸಿದ್ಧತೆ

ವಾಣಿಜ್ಯನಗರಿ ಹುಬ್ಬಳ್ಳಿಗೆ ಜನವರಿ 12ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 26ನೇ ರಾಷ್ಟ್ರೀಯ ಯುವಜನೋತ್ಸವ ಉದ್ಘಾಟನೆ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ.

ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಸ್ವಚ್ಛತೆ ಹಾಗೂ ಸಿದ್ಧತೆ ಕಾರ್ಯಗಳು ಭರದಿಂದ ಸಾಗಿದೆ.ಮಂಡ್ಯದಲ್ಲಿ ರೈತ ಮಹಿಳೆ ಮೇಲೆ ಚಿರತೆ ದಾಳಿ – ಗಂಭೀರ ಗಾಯ

ಹುಬ್ಬಳ್ಳಿಯ ರೈಲ್ವೆ ಮೈದಾನಕ್ಕೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ರಮನ್ ಗುಪ್ತಾ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ನಿಟ್ಟಿನಲ್ಲಿ ರೈಲ್ವೆ ಮೈದಾನದಲ್ಲಿ ಸಿದ್ಧತೆ ಕಾರ್ಯ ಭರದಿಂದ ಸಾಗಿದ್ದು, ಬಣ್ಣ ಹಚ್ಚುವ ಹಾಗೂ ಸ್ವಚ್ಚತಾ ಕಾರ್ಯ ಜೋರಾಗಿ ನಡೆದಿದೆ.

ಜನವರಿ 12 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಗರಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಸುರಕ್ಷತೆ ಕಾರಣಕ್ಕಾಗಿ ಪೊಲೀಸ್ ಇಲಾಖೆಯಿಂದ ಸೂಕ್ತ ಭದ್ರತೆಯನ್ನು ಕೈಗೊಳ್ಳಲಾಗುತ್ತಿದೆ. ಅಲ್ಲದೇ ಆಯಕಟ್ಟಿನ ಪ್ರದೇಶದಲ್ಲಿ ಸಾಕಷ್ಟು ಸಿದ್ಧತೆ ಕಾರ್ಯವನ್ನು ನಡೆದಿದೆ

ಜನವರಿ 12 ರಿಂದ 16ರವರೆಗೆ ಹುಬ್ಬಳ್ಳಿ, ಧಾರವಾಡದಲ್ಲಿ ರಾಷ್ಟ್ರೀಯ ಯುವ ಸಪ್ತಾಹದ ಅಂಗವಾಗಿ ಯುವ ಜನೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಇದರ ಉದ್ಘಾಟನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಮಿಸಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಹೇಳಿದ್ದರು.

ಪೋಸ್ಟ್ ಕೋವಿಡ್ ನಂತರ ಮೊದಲ ಬಾರಿಗೆ ಮೋದಿ ಅವರು ಧಾರವಾಡಕ್ಕೆ ಆಗಮಿಸಲಿದ್ದಾರೆ. ಐದು ದಿನಗಳ ಕಾಲ ನಡೆಯುವ ಈ ಕಾರ್ಯಕ್ರಮದಲ್ಲಿ ಸ್ಥಳೀಯ ಕಲಾವಿದರಿಗೆ ಆದ್ಯತೆ ನೀಡಲಾಗಿದೆ.

ಕವಿವಿಯಲ್ಲಿ ಇವೆಂಟ್ ನಡೆಯುತ್ತದೆ. ಉದ್ಘಾಟನೆ ಕಾರ್ಯಕ್ರಮದ ಸ್ಥಳ ಇನ್ನೂ ಅಂತಿಮಗೊಂಡಿಲ್ಲ. ಅವಳಿನಗರದ ಎಲ್ಲ ಕಡೆಯೂ ವೇದಿಕೆ ಮಾಡಲಿದ್ದೇವೆ. ಅಲ್ಲದೇ ಐಐಟಿ ಉದ್ಘಾಟನೆ, ಹುಬ್ಬಳ್ಳಿ ರೈಲ್ವೆ ಫ್ಲಾಟ್‌ಫಾರ್ಮ್ ಸೇರಿ ಹಲವು ಉದ್ಘಾಟನಾ ಕಾರ್ಯಕ್ರಮಗಳೂ ಅಂದು ಮೋದಿ ಅವರಿಂದ ನಡೆಯಲಿವೆ ಎಂದು ಜೋಶಿ ಮಾಹಿತಿ ನೀಡಿದ್ದರು.

Share This Article
Leave a comment