December 19, 2024

Newsnap Kannada

The World at your finger tips!

yoga

ಅಂತಾರಾಷ್ಟ್ರೀಯ ಯೋಗ ದಿನದಂದು ಮೋದಿ ಮೈಸೂರಿಗೆ

Spread the love

ಜೂನ್ 21 ಅಂದರೆ ಅಂತಾರಾಷ್ಟ್ರೀಯ ಯೋಗ ದಿನದಂದು (International Day of Yoga) ಅರಮನೆ ನಗರಿ ಮೈಸೂರಿಗೆ ಬರಲಿದ್ದಾರೆ ಪ್ರಧಾನಿ ಮೋದಿ

ವಿಶ್ವ ಯೋಗಾ ದಿನಾಚರಣೆಯನ್ನು ಪ್ರಧಾನಿ ಮೈಸೂರಿನಲ್ಲಿ ಆಚರಿಸಲಿದ್ದಾರೆ. ಮೈಸೂರಿನ ರೇಸ್ ಕೋರ್ಸ್ ಮೈದಾನದಲ್ಲಿ ಲಕ್ಷಾಂತರ ಯೋಗಪಟುಗಳ ಸಮ್ಮುಖದಲ್ಲಿ ಪ್ರಧಾನಿಗಳು ಯೋಗಾ ದಿನಾಚರಣೆಗೆ ಚಾಲನೆ ನೀಡಿ ಬಳಿಕ ತಾವು ಕೂಡ ಯೋಗ ಮಾಡಲಿದ್ದಾರೆ.

ಈ ಬಗ್ಗೆ ಕೇಂದ್ರದ ಆಯುಷ್ ಕಾರ್ಯಾಲಯ ಕರ್ನಾಟಕದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು ಪ್ರಧಾನ ಮಂತ್ರಿಗಳು ಮೈಸೂರಿಗೆ ಆಗಮಿಸುವುದನ್ನು ಖಚಿತಪಡಿಸಿದ್ದಾರೆ.

ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರು ಏಪ್ರಿಲ್ 6 ರಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅವರ ಕಚೇರಿಯಲ್ಲಿ ಭೇಟಿಯಾಗಿ ಜೂನ್ 21 ರಂದು ಮೈಸೂರಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಉದ್ಘಾಟಿಸಲು ಆಹ್ವಾನಿಸಿದರು.

ಇದನ್ನು ಓದಿ – SSLC ಪರೀಕ್ಷೆಯನ್ನು ಒಟ್ಟಿಗೆ ಬರೆದ ತಾಯಿ – ಮಗಳು – ಉತ್ತೀರ್ಣ

2015 ಜೂನ್ 21ರಂದು ಮೊದಲ ಬಾರಿಗೆ ಜಾರಿಗೆ ಬಂದಿರುವ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ವಿಶ್ವದ್ಯಾಂತ ವರ್ಷಂಪ್ರತಿ ಆಚರಿಸಲಾಗುತ್ತದೆ. ಯೋಗವು ಬಹಳ ಹಳೆಯ ಅಭ್ಯಾಸವಾಗಿದ್ದು, ಪ್ರಾಚೀನ-ಪುರಾಣ ಕಾಲದಿಂದಲೂ ದೇಶದಲ್ಲಿ ಅನುಸರಿಸುತ್ತಾ ಬರಲಾಗಿದೆ.

ಜೂನ್ 21 ದಿನವೇ ಏಕೆ ಯೋಗ ದಿನ ಪರಿಗಣಿಸಲಾಗಿದೆ ?

modi yoga

ಜೂನ್ 21 ಉತ್ತರ ಗೋಳಾರ್ಧದ ವರ್ಷದ ಅತಿ ದೀರ್ಘವಾದ ದಿನವಾಗಿದೆ. ಪ್ರಧಾನಿ ಮೋದಿ ತಮ್ಮ ಹೇಳಿಕೆಯಲ್ಲಿ, ಭಾರತೀಯರು ಪ್ರಕೃತಿಗೆ ಗೌರವ ಸಲ್ಲಿಸುವುದು ಆಧ್ಯಾತ್ಮಿಕತೆಯ ಅವಿಭಾಜ್ಯ ಅಂಗವಾಗಿದೆ. ಹಾಗೆಯೇ ಪ್ರಕೃತಿಯ ಕೊಡುಗೆಯನ್ನು ಅತ್ಯಂತ ಪವಿತ್ರವೆಂದು ಪರಿಗಣಿಸುತ್ತೇವೆ.

ಯೋಗ ಭಾರತದ ಪ್ರಾಚೀನ ಸಂಪ್ರದಾಯದ ಅಮೂಲ್ಯ ಕೊಡುಗೆಯಾಗಿದೆ. ಯೋಗವು ಮನಸ್ಸು ಮತ್ತು ದೇಹ, ಚಿಂತನೆ ಮತ್ತು ಕ್ರಿಯೆ, ಸಂಯಮ ಮತ್ತು ಸಾರ್ಥಕತೆಯನ್ನು ಒಗ್ಗೂಡಿಸುತ್ತದೆ. ಹಾಗೆಯೇ ಪ್ರಕೃತಿ ಮತ್ತು ಮನುಷ್ಯ ನಡುವೆ ಸಾಮರಸ್ಯವನ್ನುಂಟು ಮಾಡುತ್ತದೆ. ಯೋಗವು ಆರೋಗ್ಯ ಮತ್ತು ಯೋಗಕ್ಷೇಮದ ಸಮಗ್ರ ವಿಧಾನವಾಗಿದೆ.

ಯೋಗ ವ್ಯಾಯಾಮ ಮಾತ್ರವಲ್ಲದೆ ನಿಮ್ಮೊಂದಿಗೆ, ವಿಶ್ವ ಹಾಗೂ ಪ್ರಕೃತಿಯ ಜೊತೆಗೆ ಏಕತೆಯ ಅರ್ಥವನ್ನು ಕಂಡುಹಿಡಿಯಲು ನೆರವಾಗುತ್ತದೆ. ನಮ್ಮ ಪ್ರಜ್ಞೆ ಹಾಗೂ ಜೀವನಶೈಲಿ ರಚಿಸುವ ಮೂಲಕ ಹಮಾಮಾನ ಬದಲಾವಣೆ ನಿಭಾಯಿಸಲು ಮತ್ತು ಯೋಗಕ್ಷೇಮವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಈ ನಿಟ್ಟಿನಲ್ಲಿ ಅಂತರಾಷ್ಟ್ರೀಯ ಯೋಗ ದಿನವನ್ನು ಆಳವಡಿಸಿಕೊಳ್ಳಲು ನಾವು ಒಂದಾಗಿ ಕೆಲಸ ಮಾಡೋಣ ಎಂಬ ಸಂದೇಶ ನೀಡಿದ್ದರು.

ಇದನ್ನು ಓದಿ – KRS ಒಳಹರಿವಿನ ಹೆಚ್ಚಳ; 103 ಅಡಿ ತಲುಪಿದ ಅಣೆಕಟ್ಟೆ

ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಕರಡು ಪ್ರಸ್ತಾವನೆಯನ್ನು 2014 ಡಿಸೆಂಬರ್‌ನಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾರತದ ಖಾಯಂ ಪ್ರತನಿಧಿಯಾಗಿರುವ ಅಶೋಕ್ ಕುಮಾರ್ ಮಂಡಿಸಿದ್ದರು. ವಿಶ್ವಸಂಸ್ಥೆಗೆ ಇದು ಐತಿಹಾಸಿಕ ಕ್ಷಣವಾಗಿದ್ದು, ಅದರ ಸದಸ್ಯ ರಾಷ್ಟ್ರಗಳು ಅಭೂತಪೂರ್ವ ಬೆಂಬಲ ಸೂಚಿಸಿದ್ದರು. ವಿಶ್ವ ಸಂಸ್ಥೆಯ 193 ರಾಷ್ಟ್ರಗಳ ಪೈಕಿ 177 ದೇಶಗಳು ಅನುಮೋದನೆಯನ್ನು ನೀಡಿದ್ದವು.

ಅಂತರಾಷ್ಟ್ರೀಯ ಯೋಗ ದಿನದ – ಮೈಸೂರಿನ ಗಿನ್ನಿಸ್ ದಾಖಲೆ !

yoga
ಅಂತಾರಾಷ್ಟ್ರೀಯ ಯೋಗ ದಿನ ಜೂನ್ 21, 2017

55,506 ಭಾಗವಹಿಸಿ, ಅಂತಾರಾಷ್ಟ್ರೀಯ ಯೋಗ ದಿನದ ಸಂದರ್ಭದಲ್ಲಿ ಜೂನ್ 21, 2017 ರಂದು ಒಂದೇ ಸ್ಥಳದಲ್ಲಿ ಅತಿದೊಡ್ಡ ಯೋಗ ಕೂಟ ಅಧಿಕೃತವಾಗಿ ದಾಖಲೆ ಪುಸ್ತಕವನ್ನು ಪ್ರವೇಶಿಸಿತು.

Copyright © All rights reserved Newsnap | Newsever by AF themes.
error: Content is protected !!