ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ.
ಉಪಚುನಾವಣೆ ಫಲಿತಾಂಶದ ಬಳಿಕ ಮೊದಲ ಬಾರಿ ಸಿಎಂ ಬೊಮ್ಮಾಯಿ ದೆಹಲಿ ಪ್ರವಾಸ ಕೈಗೊಂಡಿದ್ದಾರೆ.
ಭೇಟಿ ಬಳಿಕ ಕೆಲ ಹೊತ್ತು ಚರ್ಚೆ ನಡೆಸಿದ್ದಾರೆ. ಈ ವೇಳೆ ರಾಜ್ಯದಲ್ಲಿ ಭುಗಿಲೆದ್ದಿರುವ ಬಿಟ್ಕಾಯಿನ್ ಪ್ರಕರಣದಲ್ಲಿ ಕಮಲ ಪಕ್ಷದ ನಾಯಕರ ಹೆಸರು ಆರೋಪ ಕುರಿತು ಸ್ಪಷ್ಟನೆ ನೀಡಿದ್ದಾರೆ ಎನ್ನಲಾಗಿದೆ.
ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಇಂದು ಪ್ರಧಾನ ಮಂತ್ರಿಗಳೊಂದಿಗೆ 1 ಗಂಟೆಗಳ ಕಾಲ ಮಾತುಕತೆ ನಡೆಸಿದೆ. ಅಭಿವೃದ್ದಿ ಯೋಜನೆಗಳ ಬಗ್ಗೆಯೂ ಚಚೆ೯ ಮಾಡಿದ್ದೇನೆ ಎಂದರು
ಬರುವ ಡಿಸೆಂಬರ್ ಎರಡು ಬಾರಿ ಬೆಂಗಳೂರಿಗೆ ಆಗಮಿಸಿ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ ಹಾಗೂ. ಶಂಕುಸ್ಥಾಪನೆ ಕಾರ್ಯಕ್ರಮಗಳಿಗೆ ಆಗಮಿಸುವುದಾಗಿ ಸ್ವತಃ ಪ್ರಧಾನ ಮಂತ್ರಿಗಳೇ ಹೇಳಿರುವುದಾಗಿ ಸಿಎಂ ಬೊಮ್ಮಾಯಿ ತಿಳಿಸಿದರು.
ಇಂದು ಕೆಲವು ಕೇಂದ್ರ ಸಚಿವರನ್ನು ಕೂಡ ಭೇಟಿ ಮಾಡುತ್ತಿದ್ದೇನೆ ಮತ್ತು ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಸಮಯ ಕೂಡ ಕೇಳಿದ್ದೇನೆ ಎಂದರು
ಈ ವೇಳೆ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು ಬಿಟ್ ಕಾಯಿನ್ ನಲ್ಲಿ ಕಾಂಗ್ರೆಸ್ಸಿಗರ ಹೆಸರು ಇದೆ ಅದರ ಬಗ್ಗೆ ಯೋಚನೆ ಮಾಡಲಿ ಎಂದರು
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು