ಆರ್ ಆರ್ ನಗರ ಹಾಗೂ ಶಿರಾದಲ್ಲಿ ಬಿಜೆಪಿ ಜಯ ಸಾಧಿಸಿರುವ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಯವರು ಹರ್ಷ ವ್ಯಕ್ತಪಡಿಸಿದ್ದಾರೆ.
ಎರಡು ವಿಧಾನಸಭಾ ಕ್ಷೇತ್ರಗಳ ಉಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಕನ್ನಡದಲ್ಲಿಯೇ ಟ್ವೀಟ್ ಮಾಡಿರುವ ಪ್ರಧಾನಿ ಮೋದಿಯವರು, ಸಂತಸ ವ್ಯಕ್ತಪಡಿಸಿದ್ದಾರೆ.
ಕರ್ನಾಟಕದ ಶಿರಾ ಹಾಗೂ ರಾಜರಾಜೇಶ್ವರಿ ನಗರದಲ್ಲಿ ಬಿಜೆಪಿ ಗೆಲುವು ಸಾಧಿಸಿರುವುದು ಅತ್ಯಂತ ವಿಶೇಷವಾದದ್ದು. ಕೇಂದ್ರ ಹಾಗೂ ಯಡಿಯೂರಪ್ಪ ಅವರ ನೇತೃತ್ವದ ರಾಜ್ಯ ಸರ್ಕಾರ ಸುಧಾರಣಾ ಕಾರ್ಯಸೂಚಿಗಳ ಮೇಲೆ ಜನರು ಹೊಂದಿರುವ ಸ್ಥಿರ ವಿಶ್ವಾಸವನ್ನು ಇದು ಪುನಃದೃಢೀಕರಿಸುತ್ತದೆ. ನಮ್ಮ ಕಾರ್ಯಕರ್ತರ ಶ್ರಮ ಹಾಗೂ ಜನರ ಬೆಂಬಲಕ್ಕೆ ನನ್ನ ಧನ್ಯವಾದಗಳು ಎಂದು ಟ್ವೀಟ್ ಮಾಡಿದ್ದಾರೆ.
ಇದರಂತೆ ಗೃಹ ಸಚಿವ ಅಮಿತ್ ಶಾ ಕೂಡ ಕನ್ನಡದಲ್ಲಿ ಟ್ವೀಟ್ ಮಾಡಿ ಜನತೆಗೆ ಧನ್ಯವಾದಗಳನ್ನು ಹೇಳಿದ್ದಾರೆ.
ಉಪಚುನಾವಣೆಯಲ್ಲಿನ ಅಭೂತ ಪೂರ್ವ ಗೆಲುವಿಗಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ನಳಿನ್ ಕುಮಾರ್ ಕಟೀಲ್ ಹಾಗೂ ಕರ್ನಾಟಕದ ಬಿಜೆಪಿ ಕಾರ್ಯಕರ್ತರಿಗೆ ಅಭಿನಂದಿನಸುತ್ತೇನೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮಾರ್ಗದರ್ಶನದಡಿ ರಾಜ್ಯವು ಅಭಿವೃದ್ಧಿ ಸಾಧಿಸಲಿದೆ. ಬಿಜೆಪಿಗೆ ನಿರಂತರ ಬೆಂಬಲ ನೀಡುತ್ತಿರುವ ಕರ್ನಾಟಕಕ್ಕೆ ಧನ್ಯವಾದಗಳು ಎಂದಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು