ಪ್ರಧಾನಿ ನರೇಂದ್ರ ಮೋದಿ ರಾಜ್ಯದ ಜನರಿಗೆ ಕನ್ನಡ ರಾಜ್ಯೋತ್ಸವ ಶುಭಾಶಯಗಳನ್ನು ಕೋರಿದ್ದಾರೆ.
ಇಂದು ಕನ್ನಡ ರಾಜ್ಯೋತ್ಸವ. ಪ್ರತಿವರ್ಷ ಈ ದಿನವನ್ನು ಕನ್ನಡದ ದಿನವಾಗಿ ಆಚರಿಸಲಾಗುತ್ತದೆ. ಆದರೆ, ಈ ಬಾರಿ ಕೊರೋನಾದಿಂದಾಗಿ 100ಕ್ಕೂ ಹೆಚ್ಚು ಜನರು ಸೇರಿ ಕನ್ನಡ ರಾಜ್ಯೋತ್ಸವ ಆಚರಿಸುವಂತಿಲ್ಲ, ಮೆರವಣಿಗೆ ಮಾಡುವಂತಿಲ್ಲ ಎಂಬ ನಿಯಮವನ್ನು ರಾಜ್ಯ ಸರ್ಕಾರ ಜಾರಿಗೊಳಿಸಿದೆ.
ಇದರ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡ ರಾಜ್ಯೋತ್ಸವ ಟ್ರೆಂಡಿಂಗ್ನಲ್ಲಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಕೂಡ ಅಚ್ಚ ಕನ್ನಡದಲ್ಲಿ ಶುಭಾಶಯಗಳನ್ನು ಕೋರಿದ್ದಾರೆ.
ಉಳಿದಂತೆ ಸಾಕಷ್ಟು ಸೆಲೆಬ್ರಿಟಿಗಳು, ರಾಜಕಾರಣಿಗಳು, ಟ್ವಿಟ್ಟಿಗರು ಕೂಡ ಕನ್ನಡ ರಾಜ್ಯೋತ್ಸವದ ಶುಭಾಶಯಗಳನ್ನು ಕೋರಿದ್ದಾರೆ. ಈ ಕಾರಣದಿಂದ ಟ್ವಿಟ್ಟರ್ನಲ್ಲಿ ಕನ್ನಡ ರಾಜ್ಯೋತ್ಸವ ಎಂಬ ಕನ್ನಡ ಪದ ಟ್ರೆಂಡಿಂಗ್ನಲ್ಲಿದೆ.
ಕನ್ನಡದಲ್ಲಿ ಟ್ವಿಟ್ ಮಾಡಿರುವ ಪ್ರಧಾನಿ ಕರ್ನಾಟಕದ ನನ್ನ ಸಹೋದರ ಮತ್ತು ಸಹೋದರಿಯರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. ಕನ್ನಡಿಗರ ಜನ ಶಕ್ತಿ ಮತ್ತು ಕೌಶಲ್ಯದಿಂದ ಕರ್ನಾಟಕ ಪ್ರಗತಿಯು ಉತ್ತುಂಗಕ್ಕೇರುತ್ತಿದೆ. ಕರ್ನಾಟಕದ ಜನತೆಯ ಸಂತಸ ಮತ್ತು ಉತ್ತಮ ಆರೋಗ್ಯಕ್ಕಾಗಿ ನಾನು ಪ್ರಾರ್ಥಿಸುತ್ತೇನೆ ಎಂದಿದ್ದಾರೆ
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
- ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಆಯೋಧ್ಯೆ ರಾಮಮಂದಿರಕ್ಕೆ ಸ್ಫೋಟದ ಬೆದರಿಕೆ: ಆರ್ಡಿಎಕ್ಸ್ ಬಳಸಿ ಧ್ವಂಸಗೊಳಿಸುವ ಎಚ್ಚರಿಕೆ
ವಿಧಾನಸಭೆ ಉಪಚುನಾವಣೆ: ನ. 13 ರಂದು ರಾಜ್ಯ ಸರ್ಕಾರದಿಂದ ವೇತನ ಸಹಿತ ರಜೆ ಘೋಷಣೆ