ಅಚ್ಚ ಕನ್ನಡದಲ್ಲಿ ರಾಜ್ಯೋತ್ಸವ ಶುಭಾಶಯ ಕೋರಿದ ಪ್ರಧಾನಿ

Team Newsnap
1 Min Read
Modi's tweet in Kannada on death of great singer Shivamogga Subbanna - condolence

ಪ್ರಧಾನಿ ನರೇಂದ್ರ ಮೋದಿ ರಾಜ್ಯದ ಜನರಿಗೆ ಕನ್ನಡ ರಾಜ್ಯೋತ್ಸವ ಶುಭಾಶಯಗಳನ್ನು ಕೋರಿದ್ದಾರೆ.

ಇಂದು ಕನ್ನಡ ರಾಜ್ಯೋತ್ಸವ. ಪ್ರತಿವರ್ಷ ಈ ದಿನವನ್ನು ಕನ್ನಡದ ದಿನವಾಗಿ ಆಚರಿಸಲಾಗುತ್ತದೆ. ಆದರೆ, ಈ ಬಾರಿ ಕೊರೋನಾದಿಂದಾಗಿ 100ಕ್ಕೂ ಹೆಚ್ಚು ಜನರು ಸೇರಿ ಕನ್ನಡ ರಾಜ್ಯೋತ್ಸವ ಆಚರಿಸುವಂತಿಲ್ಲ, ಮೆರವಣಿಗೆ ಮಾಡುವಂತಿಲ್ಲ ಎಂಬ ನಿಯಮವನ್ನು ರಾಜ್ಯ ಸರ್ಕಾರ ಜಾರಿಗೊಳಿಸಿದೆ.

ಇದರ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡ ರಾಜ್ಯೋತ್ಸವ ಟ್ರೆಂಡಿಂಗ್​ನಲ್ಲಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಕೂಡ ಅಚ್ಚ ಕನ್ನಡದಲ್ಲಿ ಶುಭಾಶಯಗಳನ್ನು ಕೋರಿದ್ದಾರೆ.

ಉಳಿದಂತೆ ಸಾಕಷ್ಟು ಸೆಲೆಬ್ರಿಟಿಗಳು, ರಾಜಕಾರಣಿಗಳು, ಟ್ವಿಟ್ಟಿಗರು ಕೂಡ ಕನ್ನಡ ರಾಜ್ಯೋತ್ಸವದ ಶುಭಾಶಯಗಳನ್ನು ಕೋರಿದ್ದಾರೆ. ಈ ಕಾರಣದಿಂದ ಟ್ವಿಟ್ಟರ್​ನಲ್ಲಿ ಕನ್ನಡ ರಾಜ್ಯೋತ್ಸವ ಎಂಬ ಕನ್ನಡ ಪದ ಟ್ರೆಂಡಿಂಗ್​ನಲ್ಲಿದೆ.

ಕನ್ನಡದಲ್ಲಿ ಟ್ವಿಟ್ ಮಾಡಿರುವ ಪ್ರಧಾನಿ ಕರ್ನಾಟಕದ ನನ್ನ ಸಹೋದರ ಮತ್ತು ಸಹೋದರಿಯರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. ಕನ್ನಡಿಗರ ಜನ ಶಕ್ತಿ ಮತ್ತು ಕೌಶಲ್ಯದಿಂದ ಕರ್ನಾಟಕ ಪ್ರಗತಿಯು ಉತ್ತುಂಗಕ್ಕೇರುತ್ತಿದೆ. ಕರ್ನಾಟಕದ ಜನತೆಯ ಸಂತಸ ಮತ್ತು ಉತ್ತಮ ಆರೋಗ್ಯಕ್ಕಾಗಿ ನಾನು ಪ್ರಾರ್ಥಿಸುತ್ತೇನೆ ಎಂದಿದ್ದಾರೆ

TAGGED: ,
Share This Article
Leave a comment