ಏಷ್ಯಾದ ದೊಡ್ಡ ವಿಮಾನ ನಿಲ್ದಾಣಕ್ಕೆ ಮೋದಿ ಶಂಕು ಸ್ಥಾಪನೆ: 2024 ಕ್ಕೆ ಮೊದಲ ಹಂತ ಕಾಮಗಾರಿ ಪೂರ್ಣ

Team Newsnap
1 Min Read

ಪ್ರಧಾನಿ ನರೇಂದ್ರ ಮೋದಿ ಐತಿಹಾಸಿಕ ಯೋಜನೆಗೆ ಗುರುವಾರ ಶಂಕು ಸ್ಥಾಪನೆ ನೆರವೇರಿಸಿದರು.
ಇದರೊಂದಿಗೆ 2024 ರ ವೇಳೆಗೆ ದೇಶದ ಅತಿದೊಡ್ಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವ ಯೋಜನೆಗೆ ಚಾಲನೆ ನೀಡಿದ್ದಾರೆ.

3,500 ಎಕರೆ ವಿಸ್ತೀರ್ಣದಲ್ಲಿ ಕಾಮಗಾರಿ ನಡೆಯುತ್ತದೆ, ಇದರಲ್ಲಿ ವಿಮಾನ ನಿಲ್ದಾಣಕ್ಕೆ ಮುಖ್ಯ ಪ್ರವೇಶದ ಉದ್ದಕ್ಕೂ ರಿಯಲ್ ಎಸ್ಟೇಟ್ ಅಭಿವೃದ್ಧಿಗಾಗಿ 167 ಎಕರೆ ಭೂಮಿಯನ್ನು ಮೀಸಲಿಡಲಾಗಿದೆ.

ಈಗಿನ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ 72 ಕಿ.ಮೀ. ದೂರದಲ್ಲಿ ನೊಯ್ಡಾ ವಿಮಾನ ನಿಲ್ದಾಣವಿದೆ, ನೋಯ್ಡಾ, ಫರಿದಾಬಾದ್ ಮತ್ತು ಗಾಜಿಯಾಬಾದ್‌ನಿಂದ 40 ಕಿ.ಮೀ. ದೂರದಲ್ಲಿದೆ.

ನಾಲ್ಕು ಹಂತಗಳಲ್ಲಿ ಈ ಯೋಜನೆ ಪೂರ್ಣವಾಗಲಿದ್ದು 2024 ರ ವೇಳೆಗೆ ಮೊದಲ ಹಂತ ಪೂರ್ಣಗೊಳಿಸಲು ಪ್ಲ್ಯಾನ್ ಮಾಡಲಾಗಿದೆ. ಈ ವಿಮಾನ ನಿಲ್ದಾಣದಿಂದ ಒಂದು ಲಕ್ಷಕ್ಕೂ ಅಧಿಕ ಮಂದಿಗೆಉದ್ಯೋಗ ಸಿಗುವ ನಿರೀಕ್ಷೆ ಹೊಂದಲಾಗಿದೆ.

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಯಮುನಾ ಇಂಟರ್‌ನ್ಯಾಷನಲ್ ಏರ್ಪೋರ್ಟ್ ಪ್ರೈವೇಟ್ ಲಿಮಿಟೆಡ್ (YIAPL) ಅಭಿವೃದ್ಧಿಪಡಿಸುತ್ತಿದೆ. ಇದು ಜ್ಯೂರಿಚ್ ಏರ್ಪೋರ್ಟ್ ಇಂಟರ್‌ನ್ಯಾಷನಲ್‌ನ ಅಂಗಸಂಸ್ಥೆಯಾಗಿದೆ. ಉತ್ತರ ಪ್ರದೇಶ ಸರ್ಕಾರವು ಅಕ್ಟೋಬರ್ 7, 2020 ರಂದು YIAPL ನೊಂದಿಗೆ ರಿಯಾಯಿತಿ ಒಪ್ಪಂದಕ್ಕೆ ಸಹಿ ಹಾಕಿದೆ.

ವಿಮಾನ ನಿಲ್ದಾಣದಲ್ಲಿ ಹೈಟೆಕ್ ಹೋಟೆಲ್, ವಿವಿಐಪಿ ಟರ್ಮಿನಲ್, ತೆರೆದ ಪ್ರವೇಶ ಇಂಧನ ಫಾರ್ಮ್, ವಿಮಾನ ನಿಲ್ದಾಣದ  ಅಗ್ನಿಶಾಮಕ ಕಟ್ಟಡ, ದೊಡ್ಡ ಮಳೆ ಕೊಯ್ಲು ಕೊಳವನ್ನು ಸಹ ನಿರ್ಮಿಸಲು ಯೋಜಿಸಲಾಗಿದೆ. ಅಲ್ಲದೇ ನಿಲ್ದಾಣದ ಸಂಕೀರ್ಣದಲ್ಲಿ 167 ಎಕರೆ ಪ್ರದೇಶವನ್ನು ರಿಯಲ್ ಎಸ್ಟೇಟ್ ಅಭಿವೃದ್ಧಿಗೆ ಮೀಸಲಿಡಲಾಗಿದೆ.

Share This Article
Leave a comment