ರಾಜ್ಯದಲ್ಲಿ ಸಂಪುಟ ವಿಸ್ತರಣೆ ಮೋದಿ ರೀತಿಯಲ್ಲಿ ಆಗಿಲ್ಲ: ಸಿ.ಟಿ.ರವಿ

Team Newsnap
1 Min Read

ಪ್ರಧಾನಿ ನರೇಂದ್ರ ಮೋದಿ ತಮ್ಮ ಸಚಿವ ಸಂಪುಟವನ್ನು ಮುಕ್ತವಾಗಿ ರಚಿಸಿಕೊಂಡ ರೀತಿಯಲ್ಲಿ ರಾಜ್ಯದಲ್ಲಿ ಸಂಪುಟ ವಿಸ್ತರಣೆ ಆಗಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಿಶ್ಲೇಷಿಸಿದ್ದಾರೆ.

ಕಲಬುರಗಿಯಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರವಿ ಬೇರೆ ಪಕ್ಷದಿಂದ ಬಂದು ರಾಜ್ಯ ಸರ್ಕಾರ ರಚನೆಗೆ ಸಹಕಾರ ಕೊಟ್ಟವರಿಗೆ ಸಚಿವ ಸ್ಥಾನ ನೀಡಬೇಕಾಗಿತ್ತು. ಹಾಗಾಗಿ ಕಲಬುರ್ಗಿ, ಚಾಮರಾಜನಗರ, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಿಗೆ ಸಂಪುಟದಲ್ಲಿ ಪ್ರಾತಿನಿಧ್ಯ ಕೊಡಲು ಸಾಧ್ಯವಾಗಿಲ್ಲ ಎಂದರು.

ಕಾಂಗ್ರೆಸ್ ಪಕ್ಷದವರು ದೇಶ ಮೊದಲು ಎಂಬ ತತ್ವ ಮರೆತು ರಾಜಕಾರಣ ಮಾಡುತ್ತಿದ್ದಾರೆ. ಆ ಪಕ್ಷದವರು ಅಧಿಕಾರ ರಾಜಕಾರಣಕ್ಕಾಗಿ ಯಾರೊಂದಿಗೆ ಬೇಕಾದರೂ ಕೈಜೋಡಿಸಿ ಸರ್ಕಾರ ರಚಿಸುತ್ತಾರೆಂದು ಎಂದು ಸಿ.ಟಿ.ರವಿ ಟೀಕಿಸಿದರು.

ಓಲೈಕೆ ರಾಜಕಾರಣದ ಪರಿಣಾಮ ದೇಶದ ಮದರಸಾಗಳಲ್ಲಿ ತಾಲಿಬಾನಿಗಳು ಸೃಷ್ಟಿಯಾಗುತ್ತಿದೆ. ಬಿಜೆಪಿ ನಾಯಕರು, ಎಲ್ಲಿಯವರೆಗೆ ಹಿಂದುತ್ವ ಆಧರಿತ ರಾಜಕಾರಣ ಅಧಿಕಾರದಲ್ಲಿ ಇರುತ್ತೋ ಅಲ್ಲಿಯತನಕ ದೇಶದಲ್ಲಿ ಕೆಲವು ಲಕ್ಷದಷ್ಟಿರುವ ಪಾರ್ಸಿಗಳು, ಯಹೂದಿಗಳಂಥವರು ನೆಮ್ಮದಿಯಿಂದ ಇರುತ್ತಾರೆ ಎಂದು ಹೇಳಿಕೊಂಡಿದ್ದಾರೆ.

Share This Article
Leave a comment