January 28, 2026

Newsnap Kannada

The World at your finger tips!

gruhalakshmi yojana , Karnataka , Government

ಆಗಸ್ಟ್ 18 ರಂದು ಗೃಹಲಕ್ಷ್ಮಿಯರ ಖಾತೆಗೆ ಹಣ: ಸಚಿವೆ ಲಕ್ಷ್ಮಿ

Spread the love

ಚಿಕ್ಕಮಂಗಳೂರು: ರಾಜ್ಯದಲ್ಲಿ ಗೃಹ ಲಕ್ಷ್ಮಿ ಯೋಜನೆ ಮತ್ತಷ್ಟು ವಿಳಂಬವಾಗಲಿದೆ. ಆಗಸ್ಟ್ 18 ರಂದು ಗೃಹಲಕ್ಷ್ಮಿಯರ ಖಾತೆಗೆ ಹಣ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ಕೊಪ್ಪ ತಾಲೂಕಿನ ಗೌರಿಗದ್ದೆ ದತ್ತಾಶ್ರಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಪ್ಲಿಕೇಶನ್ ಹಾಕಲು ಮತ್ತಷ್ಟು ವಿಳಂಬ ಆಗಲಿದೆ. ಆಗಸ್ಟ್ 17 ಅಥವಾ 18ಕ್ಕೆ ಖಂಡಿತಾ ಹಣ ಅವರ ಖಾತೆ ಸೇರುತ್ತೆ. ಯೋಜನೆಯ ಬದಲಾವಣೆಯಿಂದ ವಿಳಂಬವಾಗುತ್ತಿದೆ ಅಷ್ಟೇ ಎಂದು ವಿವರಿಸಿದ್ದಾರೆ.

ಗೃಹ ಲಕ್ಷ್ಮಿ ಯೋಜನೆ ಜನರಿಗೆ ಸರಳವಾಗಿ ಸಿಗಬೇಕು. ಹಾಗಾಗಿ ಅಧಿಕಾರಿಗಳಿಗೆ ಕೆಲ ಬದಲಾವಣೆಗಳ ಸೂಚನೆ ನೀಡಿದ್ದೇವೆ. ಗ್ರಾಮ 1 ಕರ್ನಾಟಕ, ಬೆಂಗಳೂರು 1 ನಲ್ಲಿ ಇದರ ಸೇವೆ ಲಾಭ ಪಡೆಯಬಹುದಾಗಿತ್ತು. ಈಗ ಬಾಪೂಜಿ ಸೇವಾ ಕೇಂದ್ರವನ್ನು ಸೇರಿಸಿದ್ದೇವೆ ಎಮದು ತಿಳಿಸಿದರು.ಹಣ ಪಡೆದು ವಂಚನೆ : ಕನ್ನಡ ಸೀರಿಯಲ್ ನಟಿ ಉಷಾ ಬಂಧನ

ಗ್ರಾಮ ಪಂಚಾಯಿತಿಗಳಲ್ಲಿ ಬಾಪೂಜಿ ಸೇವಾ ಕೇಂದ್ರ ಇದೆ. ಸರ್ಕಾರದ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಆಸಕ್ತಿ ಇರೋರಿಗೆ ಪ್ರಜಾಪ್ರತಿನಿಧಿ ಮಾಡುತ್ತೇವೆ. ಅವರಿಗೆ ಯಾವ ಖಾತೆಗೆ ಬೇಕೋ ಅದೇ ಅಕೌಂಟ್ ಗೆ ಹಣ ನೀಡುತ್ತೇವೆ. ಶುಕ್ರವಾರ ಕೆಲವು ಬದಲಾವಣೆ ಮಾಡಿದ್ದೇವೆ, ಅಧಿಕಾರಿಗಳು ಈಗಾಗಲೇ ಸಾಫ್ಟ್‍ವೇರ್ ರೆಡಿ ಮಾಡುತ್ತಿದ್ದಾರೆ. ಅತಿ ಶೀಘ್ರದಲ್ಲಿ ಅಪ್ಲಿಕೇಶನ್ ಡೌನ್ಲೋಡ್ ಮಾಡುವ ಯೋಜನೆಗೆ ಚಾಲನೆ ನೀಡುತ್ತೇವೆ ಎಂದು ಲಕ್ಷ್ಮಿ ಹೇಳಿದರು.

error: Content is protected !!