ಮಂಗವೊಂದು ಮನೆಯೊಳಗೆ ಮಲಗಿದ್ದ 8 ತಿಂಗಳ ಮಗುವನ್ನು ಎಳೆದೊಯ್ದ, ಮನೆ ಮೇಲಿಂದ ಕೈ ಬಿಟ್ಟ ಪರಿಣಾಮ ಮಗು ಸಾವನ್ನಪ್ಪಿದ ಘಟನೆ ತಮಿಳುನಾಡಿನ ತಂಜಾವೂರಿನಲ್ಲಿ ಭಾನುವಾರ ಜರುಗಿದೆ.
ಇಷ್ಟು ದಿನ ಮನೆಯೊಳಗೆ ನುಗ್ಗಿ ಆಹಾರ ಪದಾರ್ಥಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮಂಗಗಳು, ಈಗ ಮಂಗವೊಂದು ಹಸುಕೂಸನ್ನು ಎತ್ತಿಕೊಂಡು ಹೋಗಿ ಪ್ರಾಣಕ್ಕೆ ಕುತ್ತು ತಂದಿದೆ.
ಮೇಲ್ಚಾವಣಿ ತೆರೆದು ಮನೆಯೊಳಕ್ಕೆ ನುಗ್ಗಿಬಂದಿರುವ ಮಂಗ ಮಲಗಿರುವ ಮಗುವನ್ನು ಎತ್ತಿಕೊಂಡು ಹೋಗಿದೆ. ಆಗ ಮಗು ಅಳಲು ಪ್ರಾರಂಭಿಸಿದೆ. ಅಳುವಿನ ಶಬ್ಧವನ್ನು ಕೇಳಿ ತಾಯಿ ಓಡಿಬಂದಿದ್ದಾರೆ.

ಆದರೆ ಆ ವೇಳೆಗೆ ಮಗುವನ್ನು ಎತ್ತಿಕೊಂಡು ಮಂಗ ಪರಾರಿಯಾಗಿತ್ತು.
ತಾಯಿ ಜೋರಾಗಿ ಅಳಲು ಪ್ರಾರಂಭಿಸಿದ್ದಾಳೆ. ಅಕ್ಕಪಕ್ಕದವರು ಬಂದು ಜೋರಾಗಿ ಗಲಾಟೆ ಮಾಡಿದ್ದಾರೆ.
ಈ ವೇಳೆ ಭಯಗೊಂಡಿರುವ ಮಂಗ ಮಗುವನ್ನು ಮನೆಯ ಛಾವಣೆ ಯಿಂದಲೇ ಎಸೆದು ಹೋಗಿದೆ. ಮಗುವನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮಗು ಸಾವನ್ನಪ್ಪಿತ್ತು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ