November 16, 2024

Newsnap Kannada

The World at your finger tips!

Rain , storm , yellow alert

ರಾಜ್ಯದಲ್ಲಿ ಜೂನ್ 5 ರಿಂದ ಮುಂಗಾರು ಆರಂಭ : ಕೃಷಿ ಚಟುವಟಿಕೆ ಚುರುಕುಗೊಳಿಸಲು ರೈತರೂ ಕೂಡ ಸಿದ್ದ

Spread the love

ರಾಜ್ಯದಲ್ಲಿ ಜೂನ್.5ಕ್ಕೆ ಮುಂಗಾರು ಆರಂಭವಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ಹೇಳಿದೆ.ಮೇ 27ರಂದೇ ಕೇರಳಕ್ಕೆ ಮುಂಗಾರು ಪ್ರವೇಶವಾಗಬೇಕಿತ್ತು ಆದರೆ, ಮುಂಗಾರು ವಿಳಂಬವಾಗಲಿದೆ ಇನ್ನೆರಡು ದಿನಗಳಲ್ಲಿ ಕೇರಳಕ್ಕೆ ಮಾನ್ಸೂನ್ ಪ್ರವೇಶವಾಗುವ ಸಾಧ್ಯತೆಯಿದೆ.

ಜೂನ್.5ಕ್ಕೆ ರಾಜ್ಯದಲ್ಲೂ ಮುಂಗಾರು ಆರಂಭವಾಗಲಿದೆ , ರೈತರೂ ಕೂಡ ಕೃಷಿ ಚಟುವಟಿಕೆ ಚುರುಕುಗೊಳಿಸಲು ಸಿದ್ದತೆ ನಡೆಸಿದ್ದಾರೆ ಎಂದು ತಿಳಿಸಿದೆ.

ಅಸನಿ ಚಂಡಮಾರುತದ ಪ್ರಭಾವದಿಂದಾಗಿ ಈ ಬಾರಿ ವಾಡಿಕೆಗಿಂತ ಮೊದಲೇ ಅಂದರೆ ಮೇ 16ಕ್ಕೆ ಅಂಡಮಾನ್ ಅನ್ನು ಮುಂಗಾರು ತಲುಪಿತ್ತು. ಆದರೆ, ಆರು ದಿನಗಳ ವಿರಾಮದ ಬಳಿಕ ಈಗ ಶ್ರೀಲಂಕಾದಿಂದ ಕೇರಳದ ಕಡೆಗೆ ಚಲಿಸಲು ಪ್ರಾರಂಭಿಸಿದೆ. ಕೇರಳಕ್ಕೆ ಆಗಮಿಸುವುದು ಮಾತ್ರವೇ ಬಾಕಿ ಇದೆ ಎನ್ನಲಾಗಿದೆ.

ಮಾನ್ಸೂನ್ ಜೂನ್ 1 ರಂದು ಕೇರಳ ರಾಜ್ಯವನ್ನು ಪ್ರವೇಸಿಸಿದರೆ, ಜೂನ್ 5 ರಂದು ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನ ಕೆಲ ಭಾಗಗಳನ್ನು ಮುಟ್ಟಲಿದೆ. ಜೂನ್ 10 ರ ವೇಳೆಗೆ ಅದು ಇಡೀ ರಾಜ್ಯವನ್ನು ಆವರಿಸುತ್ತದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನು ಓದಿ :ಕರ್ನಾಟಕ ಫಿಲ್ಮ್ ಚೇಂಬರ್ ಗೆ ಭಾ.ಮಾ.ಹರೀಶ್ ಅಧ್ಯಕ್ಷರಾಗಿ ಆಯ್ಕೆ

ಮುಂದಿನ 48 ಗಂಟೆಗಳಲ್ಲಿ ದಕ್ಷಿಣ ಅರೇಬಿಯನ್ ಸಮುದ್ರದ ಕೆಲವು ಭಾಗಗಳು ಮತ್ತು ಇಡೀ ಮಾಲ್ಡೀವ್ಸ್ ಮತ್ತು ಲಕ್ಷದ್ವೀಪದ ಪಕ್ಕದ ಪ್ರದೇಶಗಳು ಹಾಗೂ ಕೊಮೊರಿನ್​ನ ಕೆಲವೆಡೆ ನೈಋತ್ಯ ಮುಂಗಾರು ಮತ್ತಷ್ಟು ಪ್ರವೇಶ ಪಡೆಯುವ ನಿರೀಕ್ಷೆ ಇದೆ. ಈ ವಾರದಲ್ಲಿ ಕೇರಳದಲ್ಲಿ ಮಾನ್ಸೂನ್ ಆರಂಭವಾಗಲು ಪೂರಕವಾದ ವಾತಾವರಣವಿದೆ ಎಂದು ಹೇಳಿದೆ.

Copyright © All rights reserved Newsnap | Newsever by AF themes.
error: Content is protected !!