ಭಾರತದ ಬಹುತೇಕ ಭಾಗಗಳಲ್ಲಿ ಈ ಬಾರಿ ಮುಂಗಾರು ಮಳೆ ಸಾಮಾನ್ಯ – ಹವಾಮಾನ ಇಲಾಖೆ

Team Newsnap
1 Min Read

ಈ ಬಾರಿ ಮಾನ್ಸೂನ್‍ನಲ್ಲಿ ಭಾರತದ ಬಹುತೇಕ ಭಾಗಗಳಲ್ಲಿ ಸಾಮಾನ್ಯ ಮಳೆಯಾಗಲಿದೆ.

ಭಾರತೀಯ ಹವಮಾನ ಇಲಾಖೆ ಈ ಮಾಹಿತಿ ನೀಡಿ ತನ್ನ ಮೊದಲ ದೀರ್ಘಾವಧಿಯ ಮುನ್ಸೂಚನೆಯಲ್ಲಿ ಪ್ರಕಟಿಸಿದೆ.

ಮಾನ್ಸೂನ್ ಮಳೆಯು ದೀರ್ಘಾವಧಿಯ ಸರಾಸರಿಯ 99 ಪ್ರತಿಶತದಷ್ಟು ಇರುತ್ತದೆ ಎಂದು ಇಲಾಖೆ ಹೇಳಿಕೆಯಲ್ಲಿ ತಿಳಿಸಿದೆ.

ಉತ್ತರ ಮತ್ತು ಮಧ್ಯ ಭಾರತದ ಹೆಚ್ಚಿನ ಭಾಗಗಳಲ್ಲಿ ಸಾಮಾನ್ಯ ಮಳೆಯಾದರೆ, ಈಶಾನ್ಯ ಮತ್ತು ವಾಯುವ್ಯ ಭಾರತದ ಕೆಲವು ಭಾಗಗಳು ಮತ್ತು ದಕ್ಷಿಣ ಪರ್ಯಾಯ ದ್ವೀಪದ ದಕ್ಷಿಣ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ

ಕೇರಳದಲ್ಲಿ ಜೂನ್ 1 ರಿಂದ ಮಾನ್ಸೂನ್ ಪ್ರಾರಂಭವಾಗುವುದರೊಂದಿಗೆ ದೇಶದಲ್ಲಿ ಮುಂಗಾರು ಮಳೆ ಪ್ರಾರಂಭವಾಗುತ್ತದೆ. ಇದು ರೈತರಿಗೆ ಅಗತ್ಯವಿರುವ ಸುಮಾರು 70 ಪ್ರತಿಶತದಷ್ಟು ಮಳೆಯನ್ನು ಒದಗಿಸುತ್ತದೆ.

Share This Article
Leave a comment