ನವದೆಹಲಿ, ಜ.16: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಖಾಸಗಿ ವಾಹನಗಳಿಗೆ ಟೋಲ್ ಸಂಗ್ರಹದ ಬದಲು ಮಾಸಿಕ ಮತ್ತು ವಾರ್ಷಿಕ ಪಾಸ್‌ಗಳನ್ನು ನೀಡುವ ಬಗ್ಗೆ ಕೇಂದ್ರ ಸರ್ಕಾರ ಪರಿಗಣಿಸುತ್ತಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಚಿವರು, ಖಾಸಗಿ ವಾಹನಗಳು ಒಟ್ಟು ಟೋಲ್ ಸಂಗ್ರಹದಲ್ಲಿ ಕೇವಲ ಶೇ.26 ರಷ್ಟಿದ್ದರೂ, ಗ್ರಾಮಸ್ಥರ ಸಂಚಾರಕ್ಕೆ ತೊಂದರೆಯಾಗದಂತೆ ಹಳ್ಳಿಗಳ ಹೊರಗೆ ಟೋಲ್ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದರು.
ಟೋಲ್ ಆದಾಯದ ಶೇ.74 ರಷ್ಟು ವಾಣಿಜ್ಯ ವಾಹನಗಳಿಂದ ಸಂಗ್ರಹವಾಗುತ್ತದೆ. ಇದರಿಂದ, ಖಾಸಗಿ ವಾಹನಗಳಿಗೆ ಮಾಸಿಕ ಅಥವಾ ವಾರ್ಷಿಕ ಪಾಸ್‌ಗಳನ್ನು ಪರಿಚಯಿಸಿದರೂ ಸರ್ಕಾರಕ್ಕೆ ನಷ್ಟವಾಗುವುದಿಲ್ಲ ಎಂದು ಹೇಳಿದ್ದಾರೆ.
ರಾಷ್ಟ್ರೀಯ ಹೆದ್ದಾರಿಗಳಲ್ಲಿ ತಡೆರಹಿತ ಸಂಚರಣೆಗಾಗಿ ಉಪಗ್ರಹ ವ್ಯವಸ್ಥೆ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯನ್ನು ಫಾಸ್ಟ್ ಟ್ಯಾಗ್ ಜೊತೆಗೆ ಜಾರಿಗೆ ತರಲು ಯೋಜನೆ ಮಾಡಲಾಗಿದೆ. ಈ ವ್ಯವಸ್ಥೆ ಪ್ರಸ್ತುತ ಟೋಲ್ ಸಂಗ್ರಹ ವಿಧಾನಕ್ಕಿಂತ ಹೆಚ್ಚು ಪ್ರಾಮಾಣಿಕ ಮತ್ತು ಅನುಕೂಲಕರವಾಗಿರುತ್ತದೆ.
ಕಳೆದ ವರ್ಷ, ಜುಲೈನಲ್ಲಿ ಕರ್ನಾಟಕದ ಬೆಂಗಳೂರು-ಮೈಸೂರು ವಿಭಾಗ (275 ಕಿಮೀ) ಮತ್ತು ಹರಿಯಾಣದ ಪಾಣಿಪತ್-ಹಿಸಾರ್ ವಿಭಾಗ (709 ಕಿಮೀ)ಗಳಲ್ಲಿ ಉಪಗ್ರಹ ಆಧಾರಿತ ಬಳಕೆದಾರ ಶುಲ್ಕ ಸಂಗ್ರಹ ವ್ಯವಸ್ಥೆಗೆ ಸಂಬಂಧಿಸಿದಂತೆ ಪ್ರಾಯೋಗಿಕ ಅಧ್ಯಯನವನ್ನು ನಡೆಸಲಾಗಿದೆ ಎಂದು ಗಡ್ಕರಿ ತಿಳಿಸಿದ್ದಾರೆ.ಇದನ್ನು ಓದಿ –ಬೆಂಗಳೂರಿನಲ್ಲಿ ಜನವರಿ 17ರಿಂದ ಯುಎಸ್ ಕಾನ್ಸುಲೇಟ್ ಕಚೇರಿ ಕಾರ್ಯಾರಂಭ
ಈ ಹೊಸ ಯೋಜನೆಯ ಮೂಲಕ ವಾಹನ ಸಂಚಾರವನ್ನು ಸುಗಮಗೊಳಿಸಿ, ಜನರ ಸಮಯ ಮತ್ತು ಇಂಧನವನ್ನು ಉಳಿಸುವ ಉದ್ದೇಶವಿದೆ.
More Stories
ಬೆಂಗಳೂರಿನಲ್ಲಿ ಜನವರಿ 17ರಿಂದ ಯುಎಸ್ ಕಾನ್ಸುಲೇಟ್ ಕಚೇರಿ ಕಾರ್ಯಾರಂಭ
ವಿಚಿತ್ರ ಕಾಯಿಲೆಗೆ 15 ಜನರು ಬಲಿಪಡೆದ ಅನುಮಾನಾಸ್ಪದ ಘಟನೆ
ಆಕಸ್ಮಿಕ ಗುಂಡು ಸಿಡಿದು ವ್ಯಕ್ತಿ ಸಾವು