ಗುಜರಾತ್‌ನ ಮೊರ್ಬಿಯ ಕೇಬಲ್ ಸೇತುವೆ ಕುಸಿತ ದುರಂತ: 141ಕ್ಕೇರಿದ ಮೃತರ ಸಂಖ್ಯೆ. 177 ರಕ್ಷಣೆ 

Team Newsnap
1 Min Read

ಗುಜರಾತ್‌ನ ಮೊರ್ಬಿ ಜಿಲ್ಲೆಯ ಮಚ್ಚು ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ತೂಗು ಸೇತುವೆ ಭಾನುವಾರ ಕುಸಿದು ಬಿದ್ದು ದೊಡ್ಡ ದುರಂತ ಸಂಭವಿಸಿದೆ. ಸೇತುವೆ ಮೇಲಿದ್ದ ಹಲವರು ನದಿಗೆ ಬಿದ್ದಿದ್ದಾರೆ. ಗುಜರಾತ್ ಸೇತುವೆ ದುರಂತದಲ್ಲಿ ಈವರೆಗೆ ಬಂದ ಮಾಹಿತಿ ಪ್ರಕಾರ 30 ಮಕ್ಕಳು ಸೇರಿದಂತೆ 90 ಜನರು ಸಾವನ್ನಪ್ಪಿದ್ದಾರೆ.

ಮೋರ್ಬಿಯಲ್ಲಿರುವ ಕೇಬಲ್ ಸೇತುವೆಯು ಐತಿಹಾಸಿಕವಾದದ್ದು. ಕಳೆದ ವಾರ ಅದನ್ನು ನವೀಕರಿಸಲಾಗಿತ್ತು. ನವೀಕರಣದ ನಂತರ, ಅಕ್ಟೋಬರ್ 26 ರಂದು ಗುಜರಾತಿ ಹೊಸ ವರ್ಷದ ದಿನದಂದು ಅದನ್ನು ಸಾರ್ವಜನಿಕರ ಉಪಯೋಗಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಅಕ್ಟೋಬರ್ 30ರಂದು ಸಂಜೆ ಛಾತ್ ಪೂಜೆಯ ನಿಮಿತ್ತ ಕೆಲವು ವಿಧಿವಿಧಾನಗಳನ್ನು ನೆರವೇರಿಸಲು ಸೇತುವೆ ಮೇಲೆ ಬಹಳಷ್ಟು ಜನರು ಜಮಾಯಿಸಿದ್ದರು.

ಪ್ರಮುಖ ಪ್ರವಾಸಿ ಆಕರ್ಷಣೆಯಾಗಿರುವ ಸೇತುವೆ ಮೇಲೆ ದೀಪಾವಳಿ ರಜೆ ಮತ್ತು ಭಾನುವಾರದ ಕಾರಣ ಪ್ರವಾಸಿಗರ ನೂಕುನುಗ್ಗಲು ಇತ್ತು.ಸೇತುವೆ ಕುಸಿದಾಗ ಮೇಲೆ ಸುಮಾರು 500 ಜನರು ಇದ್ದರು ಎನ್ನಲಾಗಿದ್ದು, ಭಾರ ಹೆಚ್ಚಾಗಿದ್ದಕ್ಕೆ ಸೇತುವೆ ಕುಸಿದಿದೆ ಎಂದು ತಿಳಿದುಬಂದಿದೆ. ಮನೆಯಲ್ಲಿ ಭಗತ್ ಸಿಂಗ್ ಪಾತ್ರದ ಅಭ್ಯಾಸ – ನೇಣಿಗೆ ಕೊರಳು, ಬಾಲಕ ಸಾವು – ಚಿತ್ರದುರ್ಗದಲ್ಲಿ ದುರಂತ

ಕೇಬಲ್ ಸೇತುವೆ ಕುಸಿತ ದುರಂತದಲ್ಲಿ ಸಾವು-ನೋವಿನ ಸಂಖ್ಯೆ ಹೆಚ್ಚಾಗುತ್ತಿದ್ದು, ಸದ್ಯ ಮೃತರ ಸಂಖ್ಯೆ 90ರಿಂದ 141ಕ್ಕೆ ಏರಿಕೆಯಾಗಿದೆ. ಇನ್ನೂ ಹಲವರು ನದಿಯಲ್ಲಿ ಸಿಲುಕಿರುವ ಅನುಮಾನ ವ್ಯಕ್ತವಾಗಿದ್ದು, ಇವರ ಶೋಧಕಾರ್ಯ ಹಾಗೂ ರಕ್ಷಣಾ ಕಾರ್ಯ ಮುಂದುವರಿದೆ. ಸ್ಥಳದಲ್ಲಿ ಸೇನೆ, ಎಸ್​ಡಿಆರ್​ಎಫ್, ಎನ್​ಡಿಆರ್​ಎಫ್​ ಬೀಡುಬಿಟ್ಟಿದೆ. ಘಟನೆಗೆ ನಿಖರ ಕಾರಣ ತಿಳಿಯಲು ತನಿಖೆಗೆ ಆದೇಶಿಸಲಾಗಿದೆ.

Share This Article
Leave a comment