ಶಿವಮೊಗ್ಗದ ಹಿಂದೂ ಕಾರ್ಯಕರ್ತ ಹರ್ಷ ಮನೆಗೆ ಶನಿವಾರ 10 ಕ್ಕೂ ಹೆಚ್ಚು ಮಂದಿ ಮಠಾಧೀಶರು ಇಂದು ಭೇಟಿ ನೀಡಿದರು. ಹಷ೯ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಇಂದಿನ ಭೇಟಿ ವೇಳೆ ಮುರುಘಾಮಠದ ಡಾ. ಶಿವಮೂರ್ತಿ ಮುರುಘ ಶರಣ ಶ್ರೀಗಳ ನೇತೃತ್ವದಲ್ಲಿ ಮಠಾಧೀಶರು ಹರ್ಷ ಮನೆಗೆ ಭೇಟಿ ನೀಡಿದರು.
ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ಭಗೀರಥ ಗುರುಪೀಠದ ಡಾ.ಪುರುಷೋತ್ತಮಾನಂದ ಪುರಿ ಸ್ವಾಮೀಜಿ, ಶಿವಶರಣ ಮಾದಾರ ಚೆನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ, ಕುಂಚಿಟಿಗ ಗುರುಪೀಠದ ಡಾ.ಶಾಂತವೀರ ಸ್ವಾಮೀಜಿ,
ಕನಕ ಗುರುಪೀಠದ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ, ಮಡಿವಾಳ ಗುರುಪೀಠದ ಡಾ.ಬಸವ ಮಾಚಿದೇವ ಸ್ವಾಮೀಜಿ, ಅಂಬಿಗರ ಗುರುಪೀಠದ ಶ್ರೀ ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿ, ಹಡಪದ ಗುರುಪೀಠದ ಶ್ರೀ ಅನ್ನದಾನಿ ಭಾರತೀ ಅಪ್ಪಣ್ಣ ಸ್ವಾಮೀಜಿ,
ಶಿವಮೊಗ್ಗ ಬಸವಕೇಂದ್ರದ ಡಾ ಬಸವ ಮರುಳಸಿದ್ಧ ಸ್ವಾಮೀಜಿ, ಶಿಕಾರಿಪುರ ವಿರಕ್ತಮಠದ ಶ್ರೀ ಚನ್ನಬಸವ ಸ್ವಾಮೀಜಿ, ದಾವಣಗೆರೆ ವಿರಕ್ತಮಠದ ಶ್ರೀ ಬಸವಪ್ರಭು ಸ್ವಾಮೀಜಿ, ಕೊರಟಗೆರೆಯ ಶ್ರೀ ಮಹಾಲಿಂಗ ಸ್ವಾಮೀಜಿಗಳು ಶಿವಮೊಗ್ಗ ನಗರದ ಸೀಗೇಹಟ್ಟಿಯಲ್ಲಿರುವ ಹರ್ಷ ನಿವಾಸಕ್ಕೆ ಭೇಟಿ ನೀಡಿದ್ದಾರೆ.
More Stories
ಮೈಸೂರಿನಲ್ಲಿ ಥೈಲ್ಯಾಂಡ್ ಯುವತಿಯರ ಬಳಸಿ ಹೈಟೆಕ್ ವೇಶ್ಯಾವಾಟಿಕೆ ಜಾಲ ಪತ್ತೆ
ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗಟ್ಟಲು ಕಠಿಣ ಕ್ರಮ: ಸುಗ್ರೀವಾಜ್ಞೆ ಮೂಲಕ ಹೊಸ ಕಾನೂನು – ಸಿಎಂ ಸಿದ್ದರಾಮಯ್ಯ
20 ಸಾವಿರ ಲಂಚ ಪಡೆಯುವಾಗ PDO ಅಧಿಕಾರಿ ಲೋಕಾಯುಕ್ತ ಬಲೆಗೆ