ಬೆಳಗ್ಗೆ 6 ಗಂಟೆಯಿಂದ ಚಾಮರಾಜಪೇಟೆ, ರಾಜಾಜಿನಗರ, ಶಾಂತಿನಗರ, ಕೆಆರ್ ಮಾರುಕಟ್ಟೆ, ವಿಜಯನಗರ, ಯಶವಂತಪುರ, ಕುಮಾರಸ್ವಾಮಿ ಲೇಔಟ್, ಮಾದವಾರ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಬಾರ ಕುಸಿತದ ಪರಿಣಾಮವಾಗಿ ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.
ಈ ಮುನ್ಸೂಚನೆಯ ಪ್ರಕಾರ, ಬೆಂಗಳೂರು ಸೇರಿದಂತೆ ದಕ್ಷಿಣ ಕನ್ನಡ, ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ, ಮಂಡ್ಯ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಕೋಲಾರ ಮತ್ತು ಹಾಸನ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.ಇದನ್ನು ಓದಿ –ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿದ ಆರೋಪಿಯ ಬಂಧನ
ಮಳೆಯ ಕಾರಣವಾಗಿ ಮುಂಜಾನೆಯ ವಾಕಿಂಗ್‌ಗೆ ತೆರಳಿದ್ದವರು ಹಾಗೂ ದಿನ ನಿತ್ಯದ ಕೆಲಸಗಳಿಗೆ ಹೊರಟಿದ್ದವರು ತೊಂದರೆ ಅನುಭವಿಸಿದ್ದಾರೆ. ವಾಹನ ಸವಾರರು ಮಳೆಯಿಂದಾಗಿ ಸಮಸ್ಯೆಗೊಳಗಾದರೆ, ನಗರದಲ್ಲಿ ಚಳಿಯ ತೀವ್ರತೆಯೂ ಹೆಚ್ಚಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು