ತಾಯಿಯೊಬ್ಬಳು ಇಬ್ಬರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪದಲ್ಲಿ ನಡದಿದೆ.
ಸಿರುಗುಪ್ಪ ತಾಲೂಕಿನ ಶಾಲಿಗನೂರು ಗ್ರಾಮದ ನಾಗರತ್ನ (40), ಪುತ್ರಿಯರಾದ ಶೃತಿ (12), ಗಿರಿಜಾ (7) ಎಂದು ಹೇಳಲಾಗಿದೆ.
ನಾಗರತ್ನ ತಮ್ಮ ಹೊಲದಲ್ಲಿದ್ದ ಕೃಷಿ ಹೊಂಡಕ್ಕೆ ತಮ್ಮಿಬ್ಬರು ಹೆಣ್ಣು ಮಕ್ಕಳೊಂದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ತಮ್ಮ ಜಮೀನಿನಲ್ಲಿ ಕೃಷಿ ಮಾಡಿಕೊಂಡು ರೈತ ಮಹಿಳೆಯಾಗಿ ಗುರುತಿಸಿಕೊಂಡಿದ್ದ ನಾಗರತ್ನ ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಆಂಧ್ರ ಬ್ಯಾಂಕ್‍ನಲ್ಲಿ ಅಂದಾಜು 5.60 ಲಕ್ಷ ರೂ ಹಾಗೂ ಖಾಸಗಿ ಲೇವಾದೇವಿಗಾರರಿಂದ 15 ಲಕ್ಷ ರೂ. ಸಾಲಮಾಡಿದ್ದರೆಂದು ಮಾಹಿತಿ ಸಿಕ್ಕಿದ್ದು, ಸಾಲ ಮರುಪಾವತಿ ಮಾಡಲು ಸಾಲಗಾರರು ಕಾಟ ಕೊಡುತ್ತಿದ್ದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕೆ ವ್ಯಕ್ತವಾಗಿದೆ.
ಘಟನಾ ಸ್ಥಳಕ್ಕೆ ಸಿರುಗುಪ್ಪ ಪೋಲಿಸ್ ಠಾಣೆಯ ಸಿಪಿಐ ಟಿ ಆರ್ ಪವಾರ್, ಪಿಎಸ್‍ಐ ಕೆ.ರಂಗಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- SBIನಲ್ಲಿ 600 ಪ್ರೊಬೇಷನರಿ ಆಫೀಸರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
- ನಾಳೆಗಾಗಿ ಬಾಳಬೇಕು ಕೇಳು ನೊಂದ ಜೀವವೇ..!
- ತುಪ್ಪ ಎಂಬ ಮಹಾ ಔಷಧಿ
- ಸಂಸತ್ ಕಟ್ಟಡದ ಬಳಿ ಬೆಂಕಿ ಹಚ್ಚಿಕೊಂಡ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು
- ಕರ್ತವ್ಯದ ವೇಳೆ ಬ್ರೈನ್ಸ್ಟ್ರೋಕ್ಗೆ ಬಲಿಯಾದ ಅರಣ್ಯ ಇಲಾಖೆ ನೌಕರ
More Stories
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ವಿಧಿವಶ
ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ