ಕಾಲುಕೆದರಿ ಜಗಳವಾಡಿದ ಸೊಸೆ ಮಾತುಗಳಿಗೆ ನೊಂದು ಅತ್ತೆ ಹಾಗೂ ಗಂಡ (ಮಗ) ಇಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ರಾಜಗೋಪಾಲನಗರ ಪೊಲೀಸ್ ಠಾಣೆ ವ್ಯಾಪ್ತಿಯ ಹೆಗ್ಗನಹಳ್ಳಿ ಕ್ರಾಸ್ ಬಳಿ ನಡೆದಿದೆ.
ಶ್ರೀನಿವಾಸ್ (33) ಹಾಗೂತಾಯಿ ಭಾಗ್ಯಮ್ಮ(57) ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಗಳು.ಮಂಡ್ಯದಲ್ಲಿ ಪಾಂಡಿಚೇರಿ ರಾಷ್ಟ್ರಮಟ್ಟದ ಸೈಕ್ಲಿಂಗ್ ಕ್ರೀಡಾಪಟು ನಾಲೆಗೆ ಈಜಲು ಹೋಗಿ ಸಾವು
ಮೃತ ಶ್ರೀನಿವಾಸ್ ಕೆಲ ದಿನಗಳ ಹಿಂದೆಯಷ್ಟೇ ಊರಿಂದ ತನ್ನ ತಾಯಿಯನ್ನು ಬೆಂಗಳೂರಿಗೆ ಕರೆದುಕೊಂಡು ಬಂದಿದ್ದರಂತೆ. ವಯಸ್ಸಾಗಿದ್ದ ಕಾರಣ ಅಮ್ಮನನ್ನು ನೋಡಿಕೊಳ್ಳಲು ಶ್ರೀನಿವಾಸ್ ಮನೆಗೆ ಕರೆ ತಂದಿದ್ದರು ಎನ್ನಲಾಗಿದೆ.
ಆದರೆ ಅತ್ತೆಯನ್ನು ಮನೆಗೆ ಕರೆದುಕೊಂಡು ಬಂದಿದ್ದಕ್ಕೆ ಶ್ರೀನಿವಾಸ್ ಪತ್ನಿ ಮನೆಯಲ್ಲಿ ಜಗಳ ಆರಂಭಿಸಿದ್ದರಂತೆ. ಇದರಿಂದ ಮನನೊಂದಿದ್ದ ಶ್ರೀನಿವಾಸ್ ಹಾಗೂ ಭಾಗ್ಯಮ್ಮ ಮನೆಯ ರೂಮ್ನಲ್ಲಿ ಇಂದು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.
ರಾಜಗೋಪಾಲನಗರ ಪೊಲೀಸರು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು