ಮಗು ರಿಯಾಳನ್ನು ಕೊಂದ ತಾಯಿ ದೀಪಾ (31) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಳೆದ ಒಂದು ವಾರದಿಂದ ಜ್ವರ ಮತ್ತು ಹೊಟ್ಟೆ ನೋವಿನಿಂದ ದೀಪಾ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ ʻನನ್ನ ಸಾವಿಗೆ ಯಾರೂ ಕಾರಣರಲ್ಲʼ , ʻಸ್ವಾರಿ ಅಮ್ಮʼ ಎಂದು ಡೆತ್ ನೋಟ್ ಬರೆದಿಟ್ಟು ಮಹಿಳೆ ಮೃತಪಟ್ಟಿದ್ದಾರೆ.ಇದನ್ನು ಓದಿ –ಮಂಡ್ಯ : ಬಿಯರ್ ತುಂಬಿದ ಟ್ರಕ್ ವಿದ್ಯುತ್ ಕಂಬಕ್ಕೆ ಡಿಕ್ಕಿ, ಚಾಲಕ ಸಾವು : ಎಣ್ಣೆಗಾಗಿ ಮುಗಿಬಿದ್ದ ಜನರು.!
ಆರ್ ಆರ್ ನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ.
ಬ್ರಹ್ಮಾವರ ಮೂಲದ ದಿವ್ಯ ಬೆಂಗಳೂರಿನಲ್ಲಿ ಕುಟುಂಬದ ಜೊತೆ ವಾಸವಾಗಿದ್ದರು. ದೀಪಾ ಪತಿ ಆದರ್ಶ್ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದಾರೆ. 2017ರಲ್ಲಿ ದೀಪಾ ಮತ್ತು ಆದರ್ಶ್ ಅವರ ಮದುವೆ ಆಗಿತ್ತು. ಮದ್ವೆಯಾದಗಿನಿಂದಲೂ ಆರ್ ಆರ್ ನಗರದ ಮಂತ್ರಿ ಅಪಾರ್ಟ್ ಮೆಂಟ್ ನಲ್ಲೇ ವಾಸವಾಗಿದ್ದರು. ಕಳೆದ ವಾರದಿಂದ ಜ್ವರ ಹಾಗೂ ಹೊಟ್ಟೆ ನೋವಿನಿಂದ ದೀಪಾ ಬಳಲುತ್ತಿದ್ದರು.ಚಿಕಿತ್ಸೆ ಪಡೆದರೂ ನೋವು ಕಡಿಮೆ ಆಗಿರಲಿಲ್ಲ. ಹೀಗಾಗಿ ದೀಪಾ ಜಿಗುಪ್ಸೆಗೊಂಡಿದ್ದರು ಎಂದು ತಿಳಿದು ಬಂದಿದ್ದರು.ರಾತ್ರಿ ಮಲಗಿದ್ದ ವೇಳೆ ಮಗುವಿನ ಕುತ್ತಿಗೆಗೆ ವೇಲ್ ಬಿಗಿದು ನೇಣು ಹಾಕಿ ಕೊಲೆ ಮಾಡಿದ್ದಾರೆ. ನಂತರ ತಾವೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು