ವಾಹನ ಸವಾರರು ರಿಯಾಯಿತಿ ದರದಲ್ಲಿ ದಂಡ ಕಟ್ಟಲು ಎರಡು ದಿನ ಬಾಕಿ

Team Newsnap
1 Min Read

ರಾಜ್ಯ ಸರ್ಕಾರದಿಂದ ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣದಲ್ಲಿ ವಾಹನ ಸವಾರರಿಗೆ ಅನುಕೂಲ ಕಲ್ಪಿಸಿಕೊಡುವ ನಿಟ್ಟಿನಲ್ಲಿ, ಶೇ.50ರಷ್ಟು ದಂಡ ಪಾವತಿಯನ್ನು ಜಾರಿಗೆ ತಂದಿತ್ತು.

ಇದೀಗ ರಿಯಾಯಿತಿ ದರದಲ್ಲಿ ದಂಡ ಕಟ್ಟುವವರಿಗೆ ಇನ್ನೆರಡೇ ದಿನ ಬಾಕಿ ಉಳಿದಿದೆ.

ಫೆ.11 ರ ಒಳಗೆ ದಾಖಲಾದ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ಬಾಕಿ ದಂಡವನ್ನು ಶೇ.50 ರಷ್ಟು ಪಾವತಿಸಿ ಪ್ರಕರಣಗಳನ್ನು ಮಾ.18 ರೊಳಗೆ ಇತ್ಯರ್ಥಪಡಿಸಿಕೊಳ್ಳಲು ಸೂಚನೆ ನೀಡಲಾಗಿದೆ.

ಬೆಂಗಳೂರಿನಲ್ಲಿ 13 ದಿನಗಳಲ್ಲಿ 3.22 ಲಕ್ಷ ಪ್ರಕರಣಗಳಿಂದ 9.30 ಕೋಟಿ ರೂ ದಂಡ ಸಂಗ್ರಹವಾಗಿದೆ.

ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸ್ಪಷ್ಟಪಡಿಸಿ, ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್ ನಲ್ಲಿ ದಿನಾಂಕ 11-02-2023ರೊಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಮತ್ತೊಂದು ಬಾರಿಗೆ ಶೇ.50ರಷ್ಟು ರಿಯಾಯಿತಿ ನೀಡಿ ಆದೇಶಿಸಿದೆ ಎಂದಿದ್ದಾರೆ.ಈ ರಿಯಾಯಿತಿಯು ದಿನಾಂಕ 04-03-2023ರಿಂದ ಅನ್ವಯವಾಗುವಂತೆ 15 ದಿನಗಳವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುತ್ತದೆ ಎಂಬುದಾಗಿ ತಿಳಿಸಿದ್ದಾರೆ.

ರಾಜ್ಯ ಸರ್ಕಾರದಿಂದ ಮೊದಲ ಬಾರಿಗೆ ಫೆ.11ರವರೆಗೆ ವಾಹನ ಸವಾರರು ಸಂಚಾರಿ ನಿಯಮ ಉಲ್ಲಂಘಿಸಿದಂತ ದಂಡ ಪಾವತಿಯಲ್ಲಿ ಶೇ.50ರಷ್ಟು ರಿಯಾಯಿತಿ ನೀಡಲಾಗಿತ್ತು. ಆ ಬಳಿಕ ಮತ್ತೆ ಕಾಲವಾಕಾಶ ನೀಡಿತ್ತು. ನಂತರ 15 ದಿನಗಳ ಕಾಲಾವಕಾಶವನ್ನು ವಿಸ್ತರಿಸಿ ಆದೇಶಿಸಿತ್ತು.ಇದನ್ನು ಓದಿ –ರಾಜ್ಯಾದ್ಯಂತ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹುಟ್ಟುಹಬ್ಬ ಆಚರಣೆ 

Share This Article
Leave a comment