ರಾಜಕೀಯಕ್ಕೆ ಗುಡ್ ಬೈ ಹೇಳಿದ ಎಂ.ಪಿ. ರೇಣುಕಾಚಾರ್ಯ

Team Newsnap
1 Min Read

ಜಿಲ್ಲೆಯ ಹೊನ್ನಾಳಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ರೇಣುಕಾರ್ಯ ಸೋಲನುಭವಿಸಿದ ಹಿನ್ನೆಲೆಯಲ್ಲಿ ಚುನಾವಣೆ ರಾಜಕೀಯಕ್ಕೆ ಗುಡ್ ಬೈ (ನಿವೃತ್ತಿ ) ಎಂದಿದ್ದಾರೆ.

ಸೋಲಿನ ನಂತರ ಬೆಂಬಲಿಗರ ಜೊತೆಗೆ ಮಾತನಾಡಿದ ರೇಣುಕಾಚಾರ್ಯ, ಹೊನ್ನಾಳಿ ಕ್ಷೇತ್ರದಲ್ಲಿ ಕೋವಿಡ್ ಸಮಯದಲ್ಲಿ ಜೀವದ ಹಂಗು ತೊರೆದು ಕೆಲಸ ಮಾಡಿದ್ದೇನೆ. ಸಾಕಷ್ಟು ಅಭಿವೃದ್ಧಿ ಮಾಡಿದ್ದರೂ ಜನರು ನನ್ನನ್ನು ಸೋಲಿಸಿದ್ದಾರೆ ಎಂದು ಭಾವುಕರಾದರು.

ನಾನು ಚುನಾವಣಾ ರಾಜಕೀಯದಲ್ಲಿ ಮುಂದುವರೆಯುವುದಿಲ್ಲ, ಮುಂದಿನ ದಿನಗಳಲ್ಲಿ ಚುನಾವಣೆಗೆ ನಿಲ್ಲುವುದಿಲ್ಲ, ಪಕ್ಷ ಯಾರಿಗೆ ಟಿಕೆಟ್ ನೀಡಿದರೂ ಅವರ ಪರ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ.

ಹೊನ್ನಾಳಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಎಂ.ಪಿ. ರೇಣುಕಾಚಾರ್ಯ, ಕಾಂಗ್ರೆಸ್ ಅಭ್ಯರ್ಥಿ ಡಿ.ಜೆ. ಶಾಂತನಗೌಡ ವಿರುದ್ಧ ಸೋಲು ಕಂಡಿದ್ದಾರೆ.

Share This Article
Leave a comment