ಕನ್ನಡ ಸಿನಿಮಾದ ಪೋಷಕ ನಟ, ನಿರ್ಮಾಪಕ ದಿ.ಎಂ.ಪಿ ಶಂಕರ್ ಪತ್ನಿ ಮಂಜುಳಾ ಶಂಕರ್ (75) ಇಂದು ಮೈಸೂರಿನಲ್ಲಿ ನಿಧನರಾದರು. ಹೃದಯ ಸಂಬಂಧ ಕಾಯಿಲೆಯಿಂದ ಬಳಲುತ್ತಿದ್ದ ಅವರು, ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ವಿದ್ಯಾರಣ್ಯಪುರಂನಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ.
ಕೆಲವು ದಿನಗಳ ಹಿಂದೆಯಷ್ಟೇ ಅವರಿಗೆ ಅನಾರೋಗ್ಯ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಅವರಿಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೃದಯ ಸಂಬಂಧಿ ಕಾಯಿಲೆ ಕಾರಣದಿಂದಾಗಿ ಆಂಜಿಯೋಗ್ರಾಮ್ ಕೂಡ ಮಾಡಲಾಗಿತ್ತು. ದಿಢೀರ್ ಅಂತ ಮತ್ತೆ ಹೃದಯಾಘಾತವಾಗಿ ಇಹಲೋಕ ತ್ಯಜಿಸಿದ್ದಾರೆ.
ಎಂ.ಪಿ.ಶಂಕರ್ ಅವರು ನಟನೆಯ ಜೊತೆಗೆ ನಿರ್ಮಾಣ ಕಾರ್ಯದಲ್ಲೂ ಬ್ಯುಸಿಯಾಗಿದ್ದಾಗ ಅವರಿಗೆ ಸಾಥ್ ನೀಡಿದವರು ಮಂಜುಳ. ಶೂಟಿಂಗ್ ಸ್ಪಾಟ್ ನಲ್ಲೂ ಶಂಕರ್ ಅವರ ಜತೆ ಮಂಜುಳಾ ಅವರು ಇರುತ್ತಿದ್ದರು. ಶಂಕರ್ ಸಿನಿಮಾವನ್ನು ನೋಡಿಕೊಳ್ಳುತ್ತಿದ್ದರೆ, ಕುಟುಂಬದ ಜವಾಬ್ದಾರಿಯನ್ನು ಮಂಜುಳಾ ಅವರು ಹೊತ್ತಿದ್ದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು