ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Team Newsnap
1 Min Read

ಬೆಂಗಳೂರು: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್​ (76) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಮೂತ್ರಕೋಶ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ರಾತ್ರಿ 1.20ಕ್ಕೆ ನಿಧನರಾಗಿದರು

1947ರಲ್ಲಿ ಜನಿಸಿದ ಶ್ರೀನಿವಾಸ್ ಪ್ರಸಾದ್ ಪೂರ್ಣ ಹೆಸರು ವೆಂಕಟಯ್ಯ ಶ್ರೀನಿವಾಸ್ ಪ್ರಸಾದ್. 1947 ಜನಿಸಿದರು.

ರಾಜಕೀಯದಲ್ಲಿ ಹೆಚ್ಚು ತೊಡಗಿಸಿಕೊಂಡಿದ್ದ ಇವರು ನಂಜನಗೂಡು ಕ್ಷೇತ್ರವನ್ನು ಪ್ರತಿನಿಧಿಸುವ ಮೂಲಕ ಕರ್ನಾಟಕ ವಿಧಾನಸಭೆಯ ಸದಸ್ಯರಾಗಿದ್ದರು. ಚಾಮರಾಜನಗರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ ಆರು ಬಾರಿ ಸಂಸದರರಾಗಿದ್ದರು. 2008, 2013ರಲ್ಲಿ ನಂಜನಗೂಡು ವಿಧಾನಸಭೆ ಕ್ಷೇತ್ರದಿಂದ ಆಯ್ಕೆಯಾಗಿದ್ದರು.

ವಾಜಪೇಯಿ ಸಂಪುಟದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಆದರೆ ಅನಾರೋಗ್ಯಕ್ಕೆ ತುತ್ತಾದ ಅವರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಇವರಿಗೆ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗಲಿಲ್ಲ

ಶ್ರೀನಿವಾಸ್ ಪ್ರಸಾದ್ ಮೂಲತಃ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನಿಂದ ಬಂದವರು. ಆ ಬಳಿಕ ಜನತಾ ದಳ ಸೇರಿದ್ದರು. ನಂತರ ಅವರು ಕಾಂಗ್ರೆಸ್‌ಗೆ ಮರಳಿದರು ಮತ್ತು 2013 ರಲ್ಲಿ ನಂಜನಗೂಡಿನಿಂದ ಶಾಸಕರಾಗಿ ಆಯ್ಕೆಯಾದರು. ಮತ್ತೆ ತಮ್ಮ ಪಕ್ಷವನ್ನು ಬದಲಾಯಿಸುವ ಮೂಲಕ 24 ಡಿಸೆಂಬರ್ 2016 ರಂದು ಅಧಿಕೃತವಾಗಿ ಬಿಜೆಪಿ ಸೇರಿದರು.

ಶ್ರೀನಿವಾಸ್ ಪ್ರಸಾದ್ ಅವರು ಸಿದ್ದರಾಮಯ್ಯ ಅವರ ಸರ್ಕಾರದಲ್ಲೂ ಕಾರ್ಯ ನಿರ್ವಹಿಸಿದ್ದಾರೆ. 2013 ರಿಂದ 2016 ರವರೆಗೆ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರದಲ್ಲಿ ಕಂದಾಯ ಮತ್ತು ಮುಜರಾಯಿ ಸಚಿವರಾಗಿ ಗುರುತಿಸಿಕೊಂಡಿದ್ದರು. ಅಷ್ಟು ಮಾತ್ರವಲ್ಲದೆ ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ 1999- ಭಾರತ ಸರ್ಕಾರದಲ್ಲಿ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾಗಿದ್ದರು.

Share This Article
Leave a comment