ಮಂಡ್ಯ ಜಿಲ್ಲೆಯಾದ್ಯಂತ ಕಳೆದ ನಾಲ್ಕು ದಿನಗಳಿಂದ ಸುರಿದ ಧಾರಾಕಾರ ಮಳೆಗೆ ಅವಾಂತರ ಸೃಷ್ಟಿಯಾಗಿ ಸಾಕಷ್ಟು ಬೆಳೆ ಹಾನಿ, ಅಪಾರ ನಷ್ಟ ಸಂಭವಿಸಿದ ಹಿನ್ನೆಲೆಯಲ್ಲಿ ಮಳೆ ಹಾನಿ ಸಂಬಂಧ ಸಂಸದೆ ಸುಮಲತಾ ಅಂಬರೀಶ್ ತಮ್ಮ ಕಚೇರಿಯಲ್ಲಿ ಗುರುವಾರ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡಸಿದರು.
ಪ್ರಮುಖವಾಗಿ ಕಾವೇರಿ ನೀರಾವರಿ ನಿಗಮ ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮಳೆಯಿಂದ ಹಾನಿಯಾಗಿರುವ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಇದನ್ನು ಓದಿ – ಮೈ- ಬೆಂ ರಾಷ್ಟ್ರೀಯ ಹೆದ್ದಾರಿ: ಚನ್ನಪಟ್ಟಣ , ರಾಮನಗರ ಬೈಪಾಸ್ ನಲ್ಲಿ ಸಂಚಾರಕ್ಕೆ ಅವಕಾಶ
ನಷ್ಟಕ್ಕೆ ಒಳಗಾದ ರೈತರಿಗೆ ಕೂಡಲೇ ಸೂಕ್ತ ಪರಿಹಾರ ನೀಡಿ ಎಂದು ಅಧಿಕಾರಿಗಳಿಗೆ ಸಂಸದೆ ಸುಮಲತಾ ತಾಕೀತು ಮಾಡಿದರು
ಮಂಡ್ಯ ಮೈಶುಗರ್ ಕಾರ್ಯಾರಂಭ:
4 ವರ್ಷದ ಬಳಿಕ ಕಬ್ಬು ನುರಿಸುವ ಕಾರ್ಯವನ್ನು ಇಂದು ಮೈಶುಗರ್ ನಲ್ಲಿ ಚಾಲನೆ ನೀಡಲಾಯಿತು. ಸಚಿವರಾದ ಕೆ.ಗೋಪಾಲಯ್ಯ, ಕೆ.ಸಿ.ನಾರಾಯಣ ಗೌಡ ಯಂತ್ರಕ್ಕೆ ಕಬ್ಬು ಹಾಕುವ ಚಾಲನೆ ನೀಡಿದ ಸಚಿವರು.
ಸಚಿವರಿಗೆ ಸಂಸದೆ ಸುಮಲತಾ, ಶಾಸಕರಾದ ಸಿ.ಎಸ್.ಪುಟ್ಟರಾಜು, ಡಾ.ಕೆ.ಅನ್ನದಾನಿ, ಅಧಿಕಾರಿಗಳು, ರೈತರು ಸಾಥ್ ನೀಡಿದರು.
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
- ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
- ಚುನಾವಣೆಗೂ ಮುನ್ನ ಕೇಜ್ರಿವಾಲ್ ಸಂಕಷ್ಟ – ಮದ್ಯ ನೀತಿ ಹಗರಣ ಪ್ರಕರಣದಲ್ಲಿ ಇಡಿಗೆ ರಾಜ್ಯಪಾಲರ ಅನುಮತಿ
- ನೆಲಮಂಗಲ ಟೀ ಬೇಗೂರು ಬಳಿ ಭೀಕರ ಸರಣಿ ಅಪಘಾತ: ಒಂದೇ ಕುಟುಂಬದ 6 ಮಂದಿ ಸಾವು
More Stories
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
ವಿರಾಟ್ ಕೊಹ್ಲಿಗೆ ಬಿಬಿಎಂಪಿ ನೋಟಿಸ್
ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ