ಬೆಂಗಳೂರಿನ ಅಂಬಿ ಮನೆಯಲ್ಲೇ ಸಂಸದೆ ಸುಮಲತಾಗೆ ಸಸಿ ನೀಡಿ ಅಭಿನಂದನೆ

Team Newsnap
2 Min Read

ರಾಜ್ಯ ಅಂಬರೀಶ್ ಅಭಿಮಾನಿಗಳ ಸಂಘದ ಅಧ್ಯಕ್ಷ ಬೇಲೂರು ಸೋಮಶೇಖರ್ ನೇತೃತ್ವದಲ್ಲಿ ಸಂಸದೆ ಸುಮಲತಾ ಅಂಬರೀಶ್ ಅಭಿನಂದಿಸಲಾಯಿತು.

ಬೆಂಗಳೂರಿನ ಜೆ. ಪಿ. ನಗರದ “ಅಂಬಿಮನೆ”ಯಲ್ಲಿ ಸ್ವಾಭಿಮಾನಿ ಸಂಸದೆ ಶ್ರೀಮತಿ ಸುಮಲತಾ ಅಂಬರೀಶ್ ರವರನ್ನು ಭೇಟಿ ಮಾಡಿ ಅವರ ಜನ್ಮದಿನದ ಪ್ರಯುಕ್ತ ಸಸಿ ನೀಡಿ ಅಭಿನಂದನೆ ಸಲ್ಲಿಸಿ ಆಶೀರ್ವಾದ ಪಡೆಯಲಾಯಿತು.

soma sasi1

ನಿನ್ನೆ ಅದ್ದೂರಿ ಕಾರ್ಯಕ್ರಮ :

ಸಂಸದೆ ಸುಮಲತಾ ಅಂಬರೀಶ್ ಅವರ ಹುಟ್ಟುಹಬ್ಬದ ಅಂಗವಾಗಿ ಅಖಿಲ ಕರ್ನಾಟಕ ಅಂಬರೀಶ್ ಅಭಿಮಾನಿಗಳ ಸಂಘದ ವತಿಯಿಂದ ಮನೆ- ಮನಗಳಲ್ಲಿ ಅಂಬರೀಶಣ್ಣ ಎಂಬ ವಿಶಿಷ್ಠ- ವಿನೂತನ ಕಾರ್ಯಕ್ರಮ ಅಶೋಕನಗರದ ವಿವೇಕಾನಂದ ಜೋಡಿ ರಸ್ತೆಯಲ್ಲಿರುವ ಸುಮಲತಾ ಅಂಬರೀಶ್ ಅವರ ಸಂಸದರ ನಿಧಿಯಿಂದ ನಿರ್ಮಿಸಲಾಗಿರುವ ಬಸ್ ನಿಲ್ದಾಣದ ಬಳಿ ನಡೆಯಿತು.

ಸಂಸದೆ ಸುಮಲತಾ ಅಂಬರೀಶ್ ಅವರ ಹುಟ್ಟುಹಬ್ಬದ ಕಾರ್ಯಕ್ರಮದ ಅಂಗವಾಗಿ ಮಹಿಳಾ ಪೌರ ಕಾರ್ಮಿಕರಿಗೆ ಅಭಿನಂದನೆ ಸಲ್ಲಿಸುವ ಮೂಲಕ ಸ್ವಾಭಿಮಾನಿ ಮಹಿಳೆಯರೊಂದಿಗೆ ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಅಖಿಲ ಕರ್ನಾಟಕ ಅಂಬರೀಶ್ ಅಭಿಮಾನಿಗಳ ಸಂಘದ ರಾಜ್ಯಾಧ್ಯಕ್ಷ ಬೇಲೂರು ಸೋಮಶೇಖರ್ ಕಾರ್ಯಕ್ರಮದಲ್ಲಿ ಮಾತನಾಡಿ ಕನ್ನಡ,ತೆಲುಗು,ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ನಟಿಸಿರುವ ಖ್ಯಾತ ಪಂಚಭಾಷಾ ನಟಿ ಸುಮಲತಾ ಅಂಬರೀಶ್ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಗೆದ್ದು ದೇಶದ ಇತಿಹಾಸ ಸೃಷ್ಟಿ ಮಾಡಿದ್ದಾರೆ ಎಂದು ಹೇಳಿದರು.

544 ಲೋಕಸಭಾ ಸದಸ್ಯರಲ್ಲಿ ಸುಮಲತಾ ಅಂಬರೀಶ್ ಅವರು ಪ್ರಖ್ಯಾತಿ ಹೊಂದಿದ್ದಾರೆ ಎಂದು ಹೇಳಿದರು.

ಬ್ಯಾಂಕಿಂಗ್ ಪರೀಕ್ಷೆಯಲ್ಲಿ ಕನ್ನಡ ಭಾಷೆಯಲ್ಲಿ ಪರೀಕ್ಷೆ ಬರೆಯಲು ಅನುಕೂಲವಾಗುವಂತೆ ಸದನದಲ್ಲಿ ಚರ್ಚೆ ಮಾಡಿದ್ದಾರೆ. ಜನರ ಸಮಸ್ಯೆಗಳು,ಪೌರಕಾರ್ಮಿಕರ ಸಮಸ್ಯೆಗಳು,ಆಶಾ ಕಾರ್ಯಕರ್ತರ ಸಮಸ್ಯೆಗಳು ಸೇರಿದಂತೆ ದಿಶಾ ಸಮಿತಿ ಸಭೆಯ ಮೀಟಿಂಗ್ ಅನ್ನು ಹೆಚ್ಚು ನಡೆಸುವ ಮೂಲಕ ದೇಶದ ಸಂಸದರಲ್ಲಿಪ್ರಥಮ ಸ್ಥಾನದಲ್ಲಿ ಇದ್ದಾರೆ ಎಂದು ಹೇಳಿದರು.

ಮುರುಘಾ ಶ್ರೀಗಳಿಗೆ ಬಂಧನದ ಭೀತಿ – ಸಂತ್ರಸ್ತ ಬಾಲಕಿಯರಿಗೆ ವೈದ್ಯಕೀಯ ಪರೀಕ್ಷೆ

ಮಂಡ್ಯ ಜಿಲ್ಲೆಯ ಎರಡು ಜ್ವಲಂತ ಸಮಸ್ಯೆಗಳ ಬಗ್ಗೆ ಗಮನ ಸೆಳೆದು ಮುಚ್ಚು ಹೋಗಿದ್ದ 2 ಕಾರ್ಖಾನೆಗಳಾದ ಮೈಷುಗರ್ ಹಾಗೂ ಪಿಎಸ್ಎಸ್ಕೆ ಪ್ರಾರಂಭಿಸಿದ್ದಾರೆ ಎಂದು ಹೇಳಿದರು.

ಜಿಲ್ಲೆಯ ರಸ್ತೆಗಳ ಅಭಿವೃದ್ಧಿಗೆ 300 ಕೋಟಿ ಅನುದಾನ ತಂದು ಕೆಲಸ ಮಾಡಿಸಿದ್ದಾರೆ. ಸಂಸದರ ನಿಧಿಯನ್ನು ಬಳಕೆ ಮಾಡುವಲ್ಲಿ ದೇಶದ ಮಹಿಳಾ ಪ್ರತಿನಿಧಿಯಾಗಿದ್ದಾರೆ. ಮುಂದಿನ ದಿನಗಳಲ್ಲಿ ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಒಳ್ಳೆಯ ಭವಿಷ್ಯವಿದೆ. ನಿಮ್ಮೆಲ್ಲರ ಆಶೀರ್ವಾದ ಅವರ ಮೇಲೆ ಇರಲಿ ಎಂದು ಹುಟ್ಟುಹಬ್ಬದ ಅಂಗವಾಗಿ ಶುಭ ಕೋರಿದರು.
ಕಾರ್ಯಕ್ರಮದಲ್ಲಿ ಮೂಡ ಮಾಜಿ ಅಧ್ಯಕ್ಷ ಮುನಾವರ್ ಖಾನ್, ನಗರಸಭಾ ಸದಸ್ಯ ನಯೀಮ್, ಮಹದೇವು, ಮಧು, ಬಸವರಾಜು, ಪುಟ್ಟಸ್ವಾಮಿ, ಹೊಂಬಯ್ಯ,ಸತೀಶ, ಪ್ರತಾಪ್, ಸೇರಿದಂತೆ ಇತರರು ಹಾಜರಿದ್ದರು.

Share This Article
Leave a comment