ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ನಿವೇಶನ ಹಂಚಿಕೆ ಹಗರಣದಲ್ಲಿ ತಮ್ಮ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈ ಕೋರ್ಟ್ ಆ.31 ಕ್ಕೆ ಮುಂದೂಡಿದೆ.
ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠದಲ್ಲಿ ಗುರುವಾರ ಸಿಎಂ ಸಲ್ಲಿಸಿದ್ದ ಅರ್ಜಿ ವಿಚಾರಣೆ ಆರಂಭವಾಯಿತು. ಸಿಎಂ ಪರ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದರು.
ಸಿಎಂ ವಿರುದ್ಧ ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ ಅನುಮತಿಯನ್ನು ನ್ಯಾಯಾಂಗ ಪರಿಶೀಲಿಸಬಹುದು. ರಾಜ್ಯಪಾಲರು ಈ ಪ್ರಕ್ರಿಯೆಯಲ್ಲಿ ವಿವೇಚನೆಯನ್ನು ಬಳಸಿಲ್ಲ ಎಂದು ಸಿಎಂ ಪರ ವಾದ ಮಂಡಿಸಿದರು.
ರಾಜ್ಯಪಾಲರು ಕ್ಯಾಬಿನೆಟ್ ನಿರ್ಧಾರಕ್ಕೆ ಬದ್ಧನಲ್ಲ ಎಂದಿದ್ದಾರೆ ಎಂದು ಸಿಎಂ ಪರ ವಕೀಲರು ಹೇಳುತ್ತಿದ್ದಂತೇ ಪ್ರತಿಕ್ರಿಯೆ ನೀಡಿದ ನ್ಯಾಯಮೂರ್ತಿಗಳು ಕ್ಯಾಬಿನೆಟ್ ನಿರ್ಧಾರಕ್ಕೆ ರಾಜ್ಯಪಾಲರು ಬದ್ಧರಾಗಬೇಕಿಲ್ಲ. ಉಳಿದೆಲ್ಲ ಪ್ರಕರಣಗಳಲ್ಲಿ ರಾಜ್ಯಪಾಲರು ಕ್ಯಾಬಿನೆಟ್ ಸಲಹೆ ಪರಿಗಣಿಸಬೇಕು. ಈ ಪ್ರಕರಣದಲ್ಲಿ ಸಲಹೆ ಪರಿಗಣಿಸಬೇಕೆಂದಿಲ್ಲ ಎಂದು ಹೇಳಿದರು
ನ್ಯಾಯಮೂರ್ತಿಗಳ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ವಕೀಲ ಅಭಿಷೇಕ್ ಮನು ಸಿಂಘ್ವಿ ಸಂಪುಟ ನಿರ್ಣಯಕ್ಕೆ ಬದ್ಧನಾಗಿಲ್ಲ ಎಂಬ ಕಾರಣಕ್ಕೆ ತನಿಖೆಗೆ ಅನುಮತಿಸುವ ನಿಲುವು ಸರಿಯಲ್ಲ ಎಂದು ಹೇಳಿದರು.ಶ್ರೀಮಂತರ ಪಟ್ಟಿಯಲ್ಲಿ ಗೌತಮ್ ಅದಾನಿಗೆ ಪ್ರಥಮ ಸ್ಥಾನ – ಅಂಬಾನಿ ಸೆಕೆಂಡ್
ಈ ನಡುವೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಮಾಜಿ ಸಚಿವ ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ ಪ್ರಕರಣಗಳಲ್ಲಿ ರಾಜ್ಯಪಾಲರು ಪಾಸಿಕ್ಯೂಷನ್ ಗೆ ಅನುಮತಿಸಿಲ್ಲ ಎಂದು ಹೈಕೋರ್ಟ್ ಗೆ ಮನವರಿಕೆ ಮಾಡಿಕೊಡುವುದಕ್ಕೆ ಸಿಂಘ್ವಿ ಯತ್ನಿಸಿದರು.
More Stories
ಸಂಸತ್ ಭವನದ ಬಳಿಯ ದಾರುಣ ಘಟನೆ: ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ
ಸಿದ್ದರಾಮಯ್ಯ ಹೆಸರನ್ನು ರಸ್ತೆಗೆ ಇಟ್ಟರೆ ತಪ್ಪೇನು? – ಸಿಎಂ ಪರ ನಿಂತುಕೊಂಡ ಪ್ರತಾಪ್ ಸಿಂಹ
ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ಏರ್ಸ್ಟ್ರೈಕ್: 15 ಮಂದಿ ಮೃತ್ಯು