January 14, 2026

Newsnap Kannada

The World at your finger tips!

siddarama cm

MUDA ಹಗರಣ: 300 ಕೋಟಿ ರೂ. ಮೌಲ್ಯದ 142 ಸ್ಥಿರ ಆಸ್ತಿ ಜಪ್ತಿ

Spread the love

ಬೆಂಗಳೂರು: MUDA ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ತನಿಖೆಯಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಈ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಸಾಮಾಜಿಕ ಕಾರ್ಯಕರ್ತರಾದ ಗಂಗರಾಜು ಮತ್ತು ಸ್ನೇಹಮಯಿ ಕೃಷ್ಣ ಅವರು ದಾಖಲಿಸಿದ ದೂರಿನ ಪ್ರಕಾರ ತನಿಖೆ ಮುಂದುವರೆದಿದೆ.

ಇಡಿ ನಡೆಸಿದ ತನಿಖೆಯಲ್ಲಿ, ರಿಯಲ್ ಎಸ್ಟೇಟ್ ಉದ್ಯಮಿಗಳು ಮತ್ತು ಏಜೆಂಟ್‌ಗಳ ಹೆಸರಿನಲ್ಲಿ ನೋಂದಣಿಯಾಗಿದ್ದ 300 ಕೋಟಿ ರೂ. ಮೌಲ್ಯದ 142 ಸ್ಥಿರ ಆಸ್ತಿಗಳನ್ನು ಜಪ್ತಿ ಮಾಡಲಾಗಿದೆ. ಈ ಸೈಟ್‌ಗಳು ನೋಂದಣಿ ಮಾಡಿದ ವ್ಯಕ್ತಿಗಳು ರಿಯಲ್ ಎಸ್ಟೇಟ್ ಉದ್ಯಮಿಗಳು ಮತ್ತು ಏಜೆಂಟ್‌ಗಳ ಹೆಸರು ಬಳಸಿದ ಬಗ್ಗೆ ಮಾಹಿತಿ ಬಹಿರಂಗವಾಗಿದೆ.

ಇಡಿಯ ತಂಡ ಮೈಸೂರಿನ ಮುಡಾ ಕಚೇರಿ ಸೇರಿ ಹಲವಾರು ಸ್ಥಳಗಳಲ್ಲಿ ದಾಳಿ ನಡೆಸಿ, ಪ್ರಮುಖ ದಾಖಲೆಗಳನ್ನು ವಶಪಡಿಸಿಕೊಂಡಿದೆ.ಇದನ್ನು ಓದಿ –ಅಬಕಾರಿ ಇಲಾಖೆಯಲ್ಲಿ ವರ್ಗಾವಣೆಗಾಗಿ ಹೊಸ ನಿಯಮ: ಪಾರದರ್ಶಕತೆ ಹೆಚ್ಚಿಸಲು ಕ್ರಮ

ಈ ತನಿಖೆಯಿಂದ ಮುಡಾ ಹಗರಣಕ್ಕೆ ಸಂಬಂಧಿಸಿದ ಪ್ರಭಾವಿ ವೈಯಕ್ತಿಕರ ಹೆಸರುಗಳು ಮತ್ತು ವೈಯಕ್ತಿಕ ಸ್ವಾಮ್ಯದ ಆಸ್ತಿಗಳ ಬಗ್ಗೆ ಹೆಚ್ಚಿನ ಮಾಹಿತಿ ಬಹಿರಂಗವಾಗುವ ಸಾಧ್ಯತೆಯಿದೆ.

error: Content is protected !!