March 12, 2026

Newsnap Kannada

The World at your finger tips!

siddaramiah

MUDA ಹಗರಣ : ಸಿಎಂ ವಿರುದ್ಧ ದೂರು ದಾಖಲು

Spread the love

ಬೆಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಟಿಜೆ ಅಬ್ರಹಾಂ ಅವರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರನ್ನು ಸಲ್ಲಿಸಿದ್ದಾರೆ.

ಈಗಾಗಲೇ ಸ್ನೇಹಮಯಿ ಕೃಷ್ಣ ಎನ್ನುವವರು ಸಿಎಂ ಸಿದ್ದರಾಮಯ್ಯ ವಿರುದ್ಧ ಖಾಸಗಿದೂರು ಸಲ್ಲಿಸಿದ್ದಾರೆ.

ಇದೀಗ ಟಿಜೆ ಅಬ್ರಹಾಂ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಮತ್ತೊಂದು ಖಾಸಗಿ ದೂರು ಸಲ್ಲಿಸಿದ್ದಾರೆ.

ನಾಳೆ ಖಾಸಗಿ ದೂರು ವಿಚಾರಣೆಗೆ ಸ್ವೀಕರಿಸುವ ಸಂಬಂಧ ನ್ಯಾಯಾಲಯವು ಆದೇಶ ನೀಡುವ ಸಾಧ್ಯತೆ ಇದೆ .

ಮುಡಾ ಹಗರಣ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ತೀವ್ರ ಸಂಕಷ್ಟಕ್ಕೆ ಸಿಲುಕಿಸಿದ್ದು , ಬಿಜೆಪಿ ಮತ್ತು ಜೆಡಿಎಸ್ ಈ ಒಂದು ಹಗರಣವನ್ನು ಖಂಡಿಸಿ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಬೆಂಗಳೂರಿನಿಂದ ಮೈಸೂರಿನವರೆಗೆ ಮೈಸೂರು ಚಲೋ ಪಾದಯಾತ್ರೆ ಕೂಡ ನಡೆಸಿದ್ದಾರೆ.ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ಇದೀಗ ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಟಿಜೆ ಅಬ್ರಹಾಂ ಮತ್ತೊಂದು ಖಾಸಗಿ ದೂರು ಸಲ್ಲಿಸಿದ್ದಾರೆ.

error: Content is protected !!